ADVERTISEMENT

130 ಕ್ವಿಂಟಲ್ ಪಡಿತರ ಅಕ್ಕಿ ವಶ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 4:16 IST
Last Updated 25 ಜೂನ್ 2021, 4:16 IST

ದಾವಣಗೆರೆ: ಇಲ್ಲಿನ ಆಜಾದ್‌ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಒಟ್ಟು ₹ 1.95 ಲಕ್ಷ ಮೌಲ್ಯದ 130.5 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೆ.ಆರ್‌. ರಸ್ತೆಯ ರಾಜ್ ಶಾದಿಮಹಲ್ ರಸ್ತೆಯ ಚಿಗಟೇರಿ ಮಿಲ್ ಪಕ್ಕದ ಸಲೀಂ ಎಂಬುವವರಿಗೆ ಸೇರಿದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ₹ 1.01 ಲಕ್ಷ ಮೌಲ್ಯದ 67.5 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೆ.ಆರ್‌. ರಸ್ತೆಯ ಜಗಳೂರು ಬಸ್‌ ನಿಲ್ದಾಣದ ಬಳಿಯಜಯಣ್ಣ ಅವರಿಗೆ ಸೇರಿದ ಗೋದಾಮಿನಲ್ಲಿ ಸಂಗ್ರಹಿಸಿದ್ದ ₹ 94,500 ಮೌಲ್ಯದ 63 ಕ್ವಿಂಟಲ್‌ನ140 ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ಕಿಶಶಿಕುಮಾರ್ ಅವರಿಗೆ ಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಆಹಾರ ನಿರೀಕ್ಷಕ ರವಿ ಶಿವಮೂರ್ತಿ ಹಿಪ್ಪರಗಿ ಅವರು ನೀಡಿದ ದೂರು ಆಧರಿಸಿ ಪೊಲೀಸರುದಾಳಿ ನಡೆಸಿದ್ದಾರೆ. ಆಜಾದ್‌ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಸಿಆರ್‌ಬಿ ಘಟಕದ ಡಿವೈಎಸ್ಪಿ ಬಸವರಾಜ್ ಮಾರ್ಗರ್ಶನದಲ್ಲಿ ಆಜಾದ್ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಶೈಲಜಾ, ಸಿಬ್ಬಂದಿ ಮಹಮ್ಮದ್ ಖಾನ್, ರವಿನಾಯ್ಕ, ಕರಿಬಸಪ್ಪ, ಪ್ರಕಾಶ್, ರಾಘವೇಂದ್ರ, ನಟರಾಜ್, ಮಾರುತಿ, ಬಾಲರಾಜ್ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಪಡಿತರದ ಅಕ್ಕಿಯನ್ನು ಕಡಿಮೆ ದರಕ್ಕೆ ಖರೀದಿಸಿ ಅಧಿಕ ದರಕ್ಕೆ ಮಾರಾಟ ಮಾಡುವ ಈ ಅಕ್ರಮವನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಅದಕ್ಕಾಗಿಯೇ ತಂಡ ರಚಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.