ದಾವಣಗೆರೆ: ನಗರದ ಜಯದೇವ ಮಹಿಳಾ ಸೇವಾ ಸಮಾಜದ ಸಭಾಂಗಣದಲ್ಲಿ ಜೂನ್ 16ರಂದು ಯಕ್ಷರಂಗ ಯಕ್ಷಗಾನ ಸಂಸ್ಥೆಯ ಸದಸ್ಯರ ಸಭೆ ನಡೆಯಲಿದೆ. ಸಾಲಿಗ್ರಾಮ ಗಣೇಶ್ ಶೆಣೈ ಸಭೆಯ ಅಧ್ಯಕ್ಷತೆ ವಹಿಸುವರು.
ಮುಂಬರುವ ವಾರ್ಷಿಕೋತ್ಸವ, ಯಕ್ಷಗಾನ ಪ್ರದರ್ಶನ, ಯಕ್ಷಗಾನದಲ್ಲಿ ಹೊಸ ಪ್ರಯೋಗ ಇತ್ಯಾದಿ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಸದಸ್ಯರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬೇಳೂರು ಸಂತೋಷ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.