ದಾವಣಗೆರೆ: ಮಾದಕವಸ್ತು ವಿರೋಧಿ ದಿನವಾದ ಜೂನ್ 26ರಂದು ವಿಶ್ವದಾದ್ಯಂತ ಜನ ಜಾಗೃತಿಗಾಗಿ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್ ಸೊಸೈಟಿ, ವಾರ್ತಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಜೂನ್ 19ರಿಂದ 26ರವರೆಗೆ ವಿಶ್ವ ಮಾದಕವಸ್ತು ವಿರೋಧಿ ಸಪ್ತಾಹವನ್ನು ಆಚರಿಸಲು ಉದ್ದೇಶಿಸಿದೆ.
ಜೂನ್ 19ರಂದು ಬೀದರ್‌ನಲ್ಲಿ ಸಪ್ತಾಹದ ಉದ್ಘಾಟನೆ ಆಗಲಿದ್ದು, ಜೂನ್ 26ರಂದು ಬೆಂಗಳೂರಿನಲ್ಲಿ ಸಮಾರೋಪ ಜರುಗಲಿದೆ. ಅಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜನಜಾಗೃತಿ ಮೆರವಣಿಗೆ, ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಲಾಗಿದೆ. ತಜ್ಞ ವೈದ್ಯರು, ಸಮಾಜ ಚಿಂತಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಪ್ತಾಹದಲ್ಲಿ ಭಾಗವಹಿಸಲಿದ್ದಾರೆ.
25ಕ್ಕೆ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆ
ತಾಲ್ಲೂಕು ಪಂಚಾಯ್ತಿಯ ಸಾಮಾನ್ಯ ಸಭೆ ಜೂನ್ 25ರಂದು ಬೆಳಿಗ್ಗೆ 11ಕ್ಕೆ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಆಶಾ ಅಜಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.