ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2021, 3:45 IST
Last Updated 4 ಸೆಪ್ಟೆಂಬರ್ 2021, 3:45 IST

ದಾವಣಗೆರೆ: 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಹೊನ್ನಾಳಿ ಪಟ್ಟಣದ ಹಿದಾಯತ್‌ ಬಾಷಾ ಶಿಕ್ಷೆಗೆ ಒಳಗಾದ ಅಪರಾಧಿ. ಹಿದಾಯತ್‌ ಬಾಷಾ 2019ರ ಫೆಬ್ರುವರಿ 23ರಂದು ಬಾಲಕಿ ಒಬ್ಬಳೇ ಮನೆಯಲ್ಲಿದ್ದಾಗ ಆಕೆ ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಹೊನ್ನಾಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಅಂದಿನ ಹೊನ್ನಾಳಿ ಸಿ‍ಪಿಐ ಬ್ರಿಜೆಷ್‌ ಮೆಹ್ತು ತನಿಖೆ ನಡೆಸಿಹಿದಾಯತ್‌ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಪಾದ್‌ ಎನ್‌. ಅವರು ಶುಕ್ರವಾರ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ವಕೀಲ ಶೌಕತ್‌ ಅಲಿ ಎಸ್‌.ಎಚ್‌.ಎಸ್‌. ಅವರು ಸರ್ಕಾರದ ಪದ ವಾದ ಮಂಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.