ADVERTISEMENT

22ಕ್ಕೆ ಹರಪನಹಳ್ಳಿಗೆ ಡಾ.ಪರಮೇಶ್ವರ್

​ಪ್ರಜಾವಾಣಿ ವಾರ್ತೆ
Published 18 ಜನವರಿ 2011, 11:25 IST
Last Updated 18 ಜನವರಿ 2011, 11:25 IST

ಹರಪನಹಳ್ಳಿ:  ಜಿ.ಪಂ. ಹಾಗೂ ತಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಆಶೀರ್ವಾದ ನೀಡಿದ ತಾಲ್ಲೂಕಿನ ಮತದಾರರಿಗೆ ಅಭಿನಂದನೆ ಸಲ್ಲಿಸಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಜ. 22ರಂದು ಹರಪನಹಳ್ಳಿಗೆ ಆಗಮಿಸುವರು.

ಪಟ್ಟಣದ ಹಳೇ ಬಸ್‌ನಿಲ್ದಾಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಅಭಿನಂದನಾ ಸಮಾರಂಭದಲ್ಲಿ ಮಾಜಿ ವಿಧಾನಸಭಾಧ್ಯಕ್ಷ ರಮೇಶಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ. ಪ್ರಕಾಶ್, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ವಿಧಾನ ಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ, ಮಾಜಿ ಶಾಸಕ ಪಿ.ಟಿ. ಪರಮೇಶ್ವರನಾಯ್ಕ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಸೇರಿದಂತೆ ಅನೇಕ ಹಿರಿಯ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಪಿ. ರವೀಂದ್ರ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ  ತಿಳಿಸಿದರು.

ಸಮಾರಂಭದಲ್ಲಿ ಪಕ್ಷದ ನೂತನ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಸದಸ್ಯರು, ಎಪಿಎಂಸಿ, ಪಿಎಲ್‌ಡಿ ಬ್ಯಾಂಕ್ ಹಾಗೂ ಟಿಎಪಿಸಿಎಂಎಸ್ ನಿರ್ದೇಶಕರು, ಪುರಸಭಾ ಸದಸ್ಯರು ಮತ್ತು ನಿಕಟಪೂರ್ವ ಜಿ.ಪಂ. ಹಾಗೂ ತಾ.ಪಂ. ಸದಸ್ಯರನ್ನು ಗೌರವಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.ಪತ್ರಿಕಾಗೋಷ್ಠಿಯಲ್ಲಿ  ವಿವಿಧ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಚ್.ಕೆ. ಹಾಲೇಶ್, ಬಿ.ಕೆ. ಪ್ರಕಾಶ್, ಕಮ್ಮತ್ತಹಳ್ಳಿ ಮಂಜುನಾಥ, ಜಿ.ಪಂ. ಮಾಜಿ ಅಧ್ಯಕ್ಷ ಎಸ್. ಚಿದಾನಂದಪ್ಪ, ಪುರಸಭಾ ಸದಸ್ಯರಾದ ಪಟೇಲ್ ಬೆಟ್ಟನಗೌಡ, ಎಂ.ವಿ. ಅಂಜಿನಪ್ಪ, ಎಚ್.ಬಿ. ಪರಶುರಾಮಪ್ಪ, ಚಿಕ್ಕೇರಿ ಬಸಪ್ಪ ಮುಖಂಡರಾದ ಟಿ.ಎಚ್.ಎಂ. ವಿರೂಪಾಕ್ಷಯ್ಯ, ಚಂದ್ರಶೇಖರ್‌ಭಟ್, ಅಂಬ್ಲಿ ಮಂಜುನಾಥ, ಡಾ.ಮಂಜುನಾಥ ಉತ್ತಂಗಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.