ADVERTISEMENT

24ಕ್ಕೆ ಬಿಜೆಪಿಯಲ್ಲಿ ಜಿಲ್ಲಾ ಬಿಎಸ್ಆರ್‌ ಕಾಂಗ್ರೆಸ್‌ ವಿಲೀನ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2014, 5:25 IST
Last Updated 22 ಮಾರ್ಚ್ 2014, 5:25 IST

ದಾವಣಗೆರೆ: ಜಿಲ್ಲಾ ಬಿಎಸ್‌ಆರ್‌ ಕಾಂಗ್ರೆಸ್‌ ಘಟಕ ಮಾರ್ಚ್‌ 24ರಂದು ಬಿಜೆಪಿಯಲ್ಲಿ ವಿಲೀನಗೊಳ್ಳಲಿದೆ ಎಂದು  ಬಿಎಸ್‌ಆರ್‌ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಮಲ್ಲೇಶ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಈ ದೇಶದ ಪ್ರಧಾನಿ ಮಾಡಬೇಕು ಎಂಬ ಉದ್ದೇಶದಿಂದ ಬಿಎಸ್‌ಆರ್‌ ಕಾಂಗ್ರೆಸ್‌ ಸಂಸ್ಥಾಪಕ ಶ್ರೀ ರಾಮುಲು ಬಿಜೆಪಿಗೆ ಸೇರಿದ್ದಾರೆ. ಅವರ ಆದೇಶದಂತೆ ಜಿಲ್ಲಾ ಬಿಎಸ್‌ಆರ್‌ ಕಾಂಗ್ರೆಸ್‌ನ ಕಾರ್ಯಕರ್ತರು, ಪದಾಧಿಕಾರಿಗಳು ಬಿಜೆಪಿಗೆ ಸೇರುತ್ತೇವೆ ಎಂದು ಅವರು ತಿಳಿಸಿದರು.

ವಿಲೀನ ಪ್ರಕ್ರಿಯೆಯಿಂದ  ಜಿಲ್ಲಾಮಟ್ಟದಲ್ಲಿ ಬಿಜೆಪಿ ಮತ್ತಷ್ಟು ಬಲಗೊಳ್ಳಲಿದೆ. ಹಾಗಾಗಿ ಮಾರ್ಚ್‌ 24 ರಂದು ಜಿಲ್ಲಾ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಎಸ್‌ಆರ್ ಕಾಂಗ್ರೆಸ್‌ ಕಾರ್ಯಕರ್ತರು ಸೇರ್ಪಡೆಯಾಗಲಿದ್ದೇವೆ ಅವರು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರವಿಕುಮಾರ್‌, ಕುಮಾರಿ ಮುಂತಾದವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.