
ಮಾಯಕೊಂಡ: ಸಮೀಪದ ಈಚಗಟ್ಟ ಗ್ರಾಮದ ಜಮೀನಿನ ಬಳಿ ಗುರುವಾರ ಸಿಡಿಲು ಬಡಿದು 25 ಮೇಕೆಗಳು ಸಾವನ್ನಪ್ಪಿದ್ದು, ಮೇಕೆ ಸಾಕಣೆದಾರರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಈಚಗಟ್ಟ ಗ್ರಾಮದ ರೇವಣಿಬಾಯಿ ಅವರಿಗೆ ಸೇರಿದ ಮೇಕೆಗಳನ್ನು ಎಂದಿನಂತೆ ಮೇಯಿಸಿಕೊಂಡ ಮನೆಗೆ ಮರಳುವ ವೇಳೆ ಗುಡುಗು ಸಿಡಿಲಿನ ಆರ್ಭಟ ಹೆಚ್ಚಾಗಿದ್ದರಿಂದ ಮೇಕೆಗಳು ಬಲಿಯಾಗಿವೆ.
‘ಮೇಕೆ ಸಾಕಣೆಯಿಂದಲೇ ಬದುಕು ಕಟ್ಟಿಕೊಂಡಿದ್ದೆವು. ಈಗ ಎಲ್ಲ ಮೇಕೆಗಳು ಸಿಡಿಲಿಗೆ ಬಲಿಯಾಗಿದ್ದು, ಜೀವನ ನಡೆಸುವುದು ಹೇಗೆ ?’ ಎಂದು ರೇವಣಿಬಾಯಿ ಅಳಲು ತೋಡಿಕೊಂಡರು.
ಶಾಸಕ ಕೆ.ಎಸ್. ಬಸವಂತಪ್ಪ ಸ್ಥಳಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಪಶು ಇಲಾಖೆ ಅಧಿಕಾರಿ ಡಾ.ನಾಗರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮೇಕೆಗಳ ಮರಣೋತ್ತರ ಪರೀಕ್ಷೆ ನಡೆಸಿದರು.
ಗ್ರಾಮ ಆಡಳಿತ ಅಧಿಕಾರಿ ಹನುಮಂತಪ್ಪ, ಮಾಯಕೊಂಡ ಪೊಲೀಸ್ ಠಾಣೆ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.