ADVERTISEMENT

27ಕ್ಕೆ ಕೆಜೆಪಿಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2012, 5:15 IST
Last Updated 26 ಡಿಸೆಂಬರ್ 2012, 5:15 IST

ದಾವಣಗೆರೆ: ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಜಾರಿಗೆ ತಂದ ವಿವಿಧ ಜನಪರ ಕಾರ್ಯಕ್ರಮಗಳನ್ನು ಈಗಿನ ಸರ್ಕಾರ ವಿಫಲಗೊಳಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಜನತಾ ಪಕ್ಷದ ಕಾರ್ಯಕರ್ತರು ಡಿ. 27ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಅಂದು ಬೆಳಿಗ್ಗೆ 11ರಿಂದ ಪಾಲಿಕೆ ಆವರಣದಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ. ಬಳಿಕ ಪ್ರತಿಭಟನಾ ಮೆರವಣಿಗೆಯ ಮೂಲಕ ತಾಲ್ಲೂಕು ಕಚೇರಿಗೆ ಸಂಜೆ 4ಕ್ಕೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಕೆಜೆಪಿಯ ಜಿಲ್ಲಾ ಸಂಚಾಲಕ  ಬಿ.ಎಸ್. ಜಗದೀಶ್ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೈಯದ್ ಹರಿಹರ, ಕೆ. ಹೇಮಂತ್ ಕುಮಾರ್, ಷಣ್ಮುಖಯ್ಯ, ವೀರಭದ್ರಸ್ವಾಮಿ, ಕೆ.ಎಸ್. ಮೋಹನ್, ಕಡ್ಲೇಬಾಳು ಬಸವರಾಜ್, ವೀರಣ್ಣ, ಪಿ.ಎಸ್. ಬಸವರಾಜ್, ರೇಣುಕಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.