ADVERTISEMENT

ಸಂತೆ ಮಾರುಕಟ್ಟೆಗೆ ₹ 3 ಕೋಟಿ ಅನುದಾನ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ವಿವಿಧ ಕಾಮಗಾರಿ ಉದ್ಘಾಟಿಸಿದ ಶಾಸಕ ಮಾಡಾಳ್‌

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 2:57 IST
Last Updated 20 ಸೆಪ್ಟೆಂಬರ್ 2020, 2:57 IST
ಚನ್ನಗಿರಿಯ ಎಪಿಎಂಸಿ ಪ್ರಾಂಗಣದಲ್ಲಿ ಶನಿವಾರ ₹ 1.83 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭೂಮಿಪೂಜೆ ನೆರವೇರಿಸಿದರು
ಚನ್ನಗಿರಿಯ ಎಪಿಎಂಸಿ ಪ್ರಾಂಗಣದಲ್ಲಿ ಶನಿವಾರ ₹ 1.83 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭೂಮಿಪೂಜೆ ನೆರವೇರಿಸಿದರು   

ಚನ್ನಗಿರಿ: ‘ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಎಪಿಎಂಸಿ ಪ್ರಾಂಗಣದಲ್ಲಿ 1000 ಮೆಟ್ರಿಕ್ ಟನ್ ಸಾಮರ್ಥ್ಯದ ಗೋದಾಮನ್ನು ನಿರ್ಮಾಣ ಮಾಡಲಾಗಿದೆ. ನಾನು ಕೂಡ ರೈತನ ಮಗನಾಗಿದ್ದು, ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧ’ ಎಂದು ರಾಜ್ಯ ಸಾಬೂನು ಮತ್ತು ಮಾರ್ಜಕ ಮಂಡಳಿ ನಿಗಮದ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಶನಿವಾರ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸಂತೆ ಮೈದಾನದಲ್ಲಿ ಮಾರುಕಟ್ಟೆ ನಿರ್ಮಿಸಲು ₹ 3 ಕೋಟಿ ಅನುದಾನ ಬಿಡುಗಡೆಗೊಳಿಸುತ್ತೇನೆ.₹ 1.83 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, ಕಮಾನು, ಚರಂಡಿ, ಪಾದಚಾರಿ ರಸ್ತೆ, ಉಪಹಾರ ಗೃಹ ನವೀಕರಣ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.

ADVERTISEMENT

ಸೆಸ್ ಸಂಗ್ರಹದಲ್ಲಿ ಜಿಲ್ಲೆಯಲ್ಲಿಯೇ ಈ ಎಪಿಎಂಸಿ ಎರಡನೇ ಸ್ಥಾನದಲ್ಲಿದೆ. ರೈತರಿಗೆ ಅನ್ಯಾಯವಾಗದ ರೀತಿಯಲ್ಲಿ ಅವರ ಸಮಸ್ಯೆಗಳನ್ನು ಬಗೆಹರಿಸಬೇಕು. ಎಪಿಎಂಸಿ ಆಡಳಿತ ಮಂಡಳಿ ಈ ಎಲ್ಲಾ ಕಾಮಗಾರಿಗಳ ನಿರ್ವಹಣೆಯನ್ನು ಮಾಡಬೇಕು ಎಂದು ಸೂಚಿಸಿದರು.

ಸದಸ್ಯರಾದ ಟಿ. ನಾಗರಾಜ್, ಟಿ. ನಾಗರಾಜ್, ಜಿ.ಆರ್. ಪ್ರಕಾಶ್, ವೀರಭದ್ರಪ್ಪ, ಕಗ್ಗಿ ರಾಜು, ಉಪಾಧ್ಯಕ್ಷೆ ಜಯ್ಯಮ್ಮ, ಕಾರ್ಯದರ್ಶಿ ಸೋಮಶೇಖರ್, ಎಂ.ಬಿ. ರಾಜಪ್ಪ, ವಿಜಯಕುಮಾರ್ ಉಪಸ್ಥಿತರಿದ್ದರು. ಅಧ್ಯಕ್ಷ ಜಿ.ಬಿ. ಜಗನ್ನಾಥ್ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.