ADVERTISEMENT

ಗೆದ್ದಲಹಟ್ಟಿ: 4 ಕೆಜಿ ಗಾಂಜಾ ಗಿಡ ವಶ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 15:17 IST
Last Updated 14 ಸೆಪ್ಟೆಂಬರ್ 2020, 15:17 IST
ಚನ್ನಗಿರಿ ತಾಲ್ಲೂಕಿನ ಗೆದ್ದಲಹಟ್ಟಿ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡರು.
ಚನ್ನಗಿರಿ ತಾಲ್ಲೂಕಿನ ಗೆದ್ದಲಹಟ್ಟಿ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡರು.   

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಗೆದ್ದಲಹಟ್ಟಿ ಗ್ರಾಮದ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು ಆತನಿಂದ ₹80 ಸಾವಿರ ಮೌಲ್ಯದ 10 ಕೆಜಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

ಮಹೇಶ ಅಲಿಯಾಸ್ ತಿರುಕಪ್ಪರ ಮಹೇಶ (48) ಬಂಧಿತ. ಮಾಹಿತಿ ಮೇರೆಗೆ ಚನ್ನಗಿರಿ ಉಪವಿಭಾಗದ ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಗ್ರಾಮದ ಚೌಡೇಶ್ವರಿ ದೇವಸ್ಥಾನದ ಪಕ್ಕದ ಬದುವಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

ಸರ್ಕಲ್ ಇನ್‌ಸ್ಪೆಕ್ಟರ್ ಆರ್.ಆರ್. ಪಾಟೀಲ್, ಸಂತೇಬೆನ್ನೂರು ಠಾಣೆಯ ಪಿಎಸ್‌ಐ ಶಿವರುದ್ರಪ್ಪ ಎಸ್.ಮೇಟಿ, ಸಿಬ್ಬಂದಿ ಚಿದಾನಂದಪ್ಪ, ಎಚ್. ಹಮೀದ್, ಡಿ. ನಿಂಗಣ್ಣ, ಆರ್‌. ನಾಗರಾಜನಾಯ್ಕ, ಆಂಜನೇಯ, ಧರ್ಮಪ್ಪ, ರಂಗಸ್ವಾಮಿ. ಕೊಟ್ರೇಶ ದಾಳಿಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ದಾಳಿಯಲ್ಲಿ ಪಾಲ್ಗೊಂಡ ಪೊಲೀಸರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಎಎಸ್ಪಿ ರಾಜೀವ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.