ADVERTISEMENT

ದಾವಣಗೆರೆ: ಜಿಲ್ಲೆಯಲ್ಲಿ 4.4 ಮಿ.ಮೀ. ಮಳೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 4:58 IST
Last Updated 16 ಏಪ್ರಿಲ್ 2021, 4:58 IST
ದಾವಣಗೆರೆಯಲ್ಲಿ ಬುಧವಾರ ಸುರಿದ ಮಳೆಯಿಂದ ಜಯದೇವ ವೃತ್ತದ ಬಳಿ ಮಳೆ ನೀರು ನಿಂತಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡುವಂತಾಯಿತು.
ದಾವಣಗೆರೆಯಲ್ಲಿ ಬುಧವಾರ ಸುರಿದ ಮಳೆಯಿಂದ ಜಯದೇವ ವೃತ್ತದ ಬಳಿ ಮಳೆ ನೀರು ನಿಂತಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡುವಂತಾಯಿತು.   

ದಾವಣಗೆರೆ:ಜಿಲ್ಲೆಯಲ್ಲಿ ಬುಧವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಸರಾಸರಿ 4.4 ಮಿ.ಮೀ. ಸರಾಸರಿ ಮಳೆಯಾಗಿದೆ.

ಚನ್ನಗಿರಿಯಲ್ಲಿ 8.5 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 5.6 ಮಿ.ಮೀ., ಹರಿಹರದಲ್ಲಿ 3.7 ಮಿ.ಮೀ., ಹೊನ್ನಾಳಿಯಲ್ಲಿ 1.0 ಮಿ.ಮೀ., ಜಗಳೂರಿನಲ್ಲಿ 3.1 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಸರಾಸರಿ 4.4 ಮಿ.ಮೀ ವಾಸ್ತವಮಳೆಯಾಗಿದೆ.

ದಾವಣಗೆರೆ ತಾಲ್ಲೂಕಿನಲ್ಲಿ 1 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ₹ 30 ಸಾವಿರ ನಷ್ಟ ಸಂಭವಿಸಿದೆ. ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.