ADVERTISEMENT

‘ಕೆರೆ ನಿರ್ಮಾಣಕ್ಕೆ ₹ 5 ಕೋಟಿ’-ಕೆ.ಮಾಡಾಳ್ ವಿರೂಪಾಕ್ಷಪ್ಪ

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 5:12 IST
Last Updated 30 ಜೂನ್ 2022, 5:12 IST
ಸಂತೇಬೆನ್ನೂರು ಸಮೀಪದ ಅರಳಿಕಟ್ಟೆ ಗ್ರಾಮದಲ್ಲಿ ಭಾನುವಾರ ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ 90 ಫಲಾನುಭವಿಗಳಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಕ್ಕುಪತ್ರ ವಿತರಿಸಿದರು.
ಸಂತೇಬೆನ್ನೂರು ಸಮೀಪದ ಅರಳಿಕಟ್ಟೆ ಗ್ರಾಮದಲ್ಲಿ ಭಾನುವಾರ ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ 90 ಫಲಾನುಭವಿಗಳಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಕ್ಕುಪತ್ರ ವಿತರಿಸಿದರು.   

ಸಂತೇಬೆನ್ನೂರು:ಅಂತರ್ಜಲ ವೃದ್ಧಿಸಲು ಅರಳಿಕಟ್ಟೆ ಗ್ರಾಮದ ಗೋಮಾಳದಲ್ಲಿ ನೂತನ ಕೆರೆ ನಿರ್ಮಾಣಕ್ಕೆ ₹ 5 ಕೋಟಿ ಮಂಜೂರು ಮಾಡಲಾಗಿದೆ. ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ಸಮೀಪದ ಅರಳಿಕಟ್ಟೆ ಗ್ರಾಮದಲ್ಲಿ ಬುಧವಾರ ಕಾಕನೂರು ಗ್ರಾಮ ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅರಳಿಕಟ್ಟೆ ಗೋಮಾಳದ 5 ಎಕರೆಯಲ್ಲಿ 134 ನಿವೇಶನಗಳಿವೆ. ಅರ್ಹ 90 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು. ಸದ್ಯ ಪರಿಶಿಷ್ಟ ಜಾತಿ/ವರ್ಗದವರಿಗೆ ಮನೆ ಕಟ್ಟಲು ₹ 2 ಲಕ್ಷ ಹಾಗೂ ಸಾಮಾನ್ಯ ವರ್ಗದವರಿಗೆ ₹ 1.50 ಲಕ್ಷ ನೀಡಲು ಕ್ರಮ ಕೈಗೊಳ್ಳಲಾಗುವುದು. ಕ್ಷೇತ್ರದಲ್ಲಿ 1,227 ಮನೆಗಳನ್ನು ನಿರ್ಮಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ವಿಕಾಸ್ ಯೋಜನೆಯಡಿಯಲ್ಲಿ ತಾಲ್ಲೂಕಿನ ರೈತರಿಗೆ ₹ 101 ಕೋಟಿ ನೀಡಲಾಗಿದೆ ಎಂದರು.

ADVERTISEMENT

ತಾಲ್ಲೂಕಿನ 100 ಮಹಿಳಾ ಸಂಘಗಳಿಗೆ ಶೀಘ್ರ ತಲಾ ₹ 1 ಲಕ್ಷ ಮಂಜೂರು ಮಾಡಲಾಗುವುದು. ಸುಪ್ತ ನಿಧಿ ಯೋಜನೆಯಲ್ಲಿ ನಾಲ್ಕು ಸಂಘಗಳಿಗೆ ತಲಾ ₹ 15, 000 ನೀಡಲಾಗುವುದು ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷ ಅಣ್ಣಮ್ಮ, ಸದಸ್ಯರಾದ ಅಶೋಕ, ಸವಿತಾ, ಬೆಸ್ಕಾಂ ಎಇಇ ಪ್ರವೀಣ್, ಎಸ್‌ಐ ಶಿವರುದ್ರಪ್ಪ ಮೇಟಿ, ಪಿಡಿಒ ಆಶಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.