ಹೊನ್ನಾಳಿ: ಉದ್ಯೋಗ ಖಾತ್ರಿ ಯೋಜನೆಯಡಿ ಸುಸಜ್ಜಿತ ಬಾಕ್ಸ್ ಚರಂಡಿಗಳನ್ನು ಹಾಗೂ ಜಮೀನುಗಳಿಗೆ ರಸ್ತೆಯನ್ನು ನಿರ್ಮಿಸಿಕೊಳ್ಳುವ ಸಂಬಂಧ ಗ್ರಾಮ ಪಂಚಾಯ್ತಿ ಸದಸ್ಯರು ಕ್ರಿಯಾ ಯೋಜನೆ ತಯಾರಿಸುವಂತೆ ಶಾಸಕ ಶಾಂತನಗೌಡ ಹೇಳಿದರು.
ಶನಿವಾರ ತಾಲ್ಲೂಕಿನ ನೆಲಹೊನ್ನೆ ಗ್ರಾಮದಲ್ಲಿ ₹ 30 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯ್ತಿಗಳಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತದೆ. ಆದ್ದರಿಂದ ಉದ್ಯೋಗ ಖಾತ್ರಿ ಯೋಜನೆಯನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ಮೋಹನ್, ಬಸವರಾಜಪ್ಪ, ಮುಖಂಡರಾದ ಕರಿಯಪ್ಪ, ಕೃಷ್ಣಪ್ಪ, ನಂಜಪ್ಪ, ಜಯಪ್ಪ ಸೇರಿದಂತೆ ಹಲವರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.