ADVERTISEMENT

ಮೋದಿ ಸಭೆಗೆ 15 ಸಾವಿರ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2018, 6:55 IST
Last Updated 4 ಫೆಬ್ರುವರಿ 2018, 6:55 IST

ದಾವಣಗೆರೆ: ಬೆಂಗಳೂರಿನಲ್ಲಿ ಇದೇ 4ರಂದು ಬಿಜೆಪಿ ಹಮ್ಮಿಕೊಂಡಿರುವ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಜಿಲ್ಲೆಯಿಂದ ಸುಮಾರು 15 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

ಸಮಾವೇಶಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಕೇಂದ್ರ ಸಚಿವರು ಭಾಗವಹಿಸುವರು.

ಜಿಲ್ಲೆಯಿಂದ ತೆರಳುವ ಕಾರ್ಯಕರ್ತರಿಗೆ 200 ಬಸ್‌, 230 ಕ್ರೂಸರ್‌, 100 ಕಾರು ವ್ಯವಸ್ಥೆ ಮಾಡಲಾಗಿದೆ. ಎಲ್ಲರೂ ಭಾನುವಾರ ಬೆಳಿಗ್ಗೆ 7 ದಾವಣಗೆರೆಯಿಂದ ತೆರಳುವರು. ಅಲ್ಲದೇ, ಮುಖಂಡರು ಸ್ವಂತ ವಾಹನಗಳಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.