ADVERTISEMENT

ಬಜೆಟ್‌ನಲ್ಲಿ ಈಡೇರದ ವೇತನ ಹೆಚ್ಚಳ ಬೇಡಿಕೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 9:18 IST
Last Updated 19 ಫೆಬ್ರುವರಿ 2018, 9:18 IST

ಜಗಳೂರು: ವೇತನ ಹೆಚ್ಚಳದ ಬಗ್ಗೆ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಪ್ರಸ್ತಾಪ ಮಾಡದಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಬಿಸಿಯೂಟ ತಯಾರಕರು ಪ್ರತಿಭಟನೆ ನಡೆಸಿದರು. ಇಲ್ಲಿನ ಮಹಾತ್ಮಗಾಂಧಿ ವೃತ್ತದಲ್ಲಿ ಎಐಟಿಯುಸಿ ನೇತೃತ್ವದಲ್ಲಿ ಅಕ್ಷರದಾಸೋಹ ಬಿಸಿಯೂಟ ತಯಾರಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು

ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಮಹಮ್ಮದ್‌ ಬಾಷಾ ಮಾತನಾಡಿ, ಬಿಸಿಯೂಟ ತಯಾರಕರ ವೇತನವನ್ನು ನ್ಯಾಯಯುತವಾಗಿ ಹೆಚ್ಚಳ ಮಾಡುವ ಕುರಿತು ಈ ಹಿಂದೆ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಆದರೆ ಈ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ.

ಅತ್ಯಂತ ಕಡಿಮೆ ವೇತನಕ್ಕೆ ಗ್ರಾಮೀಣ ಮತ್ತು ಪಟ್ಟಣ ಪ್ರದೇಶದಲ್ಲಿ ಶ್ರಮದಾಯಕ ಕೆಲಸ ಮಾಡುವ ತಯಾರಕರ ವೇತನವನ್ನು ಕೂಡಲೇ ಹೆಚ್ಚಿಸಬೇಕು. ಇಲ್ಲವಾದಲ್ಲಿ ತೀವ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಂಘಟನೆಯ ಪದಾಧಿಕಾರಿಗಳಾದ ಗೀತಾ, ಚನ್ನಮ್ಮ, ಕರಿಬಸಮ್ಮ, ನೀಲಾ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.