ADVERTISEMENT

ಚನ್ನಗಿರಿ: 73 ರೈತರಿಗೆ ಸಾಗುವಳಿ ಹಕ್ಕುಪತ್ರ

ತಾಲ್ಲೂಕು ಬಗರ್‌ಹುಕುಂ ಸಮಿತಿ ಸಭೆಯಲ್ಲಿ ಶಾಸಕ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2021, 3:37 IST
Last Updated 5 ಸೆಪ್ಟೆಂಬರ್ 2021, 3:37 IST
ಚನ್ನಗಿರಿಯ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಮಟ್ಟದ ಬಗರ್‌ಹುಕುಂ ಸಮಿತಿ ಸಭೆಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿಗಳನ್ನು ಪರಿಶೀಲಿಸಿದರು.
ಚನ್ನಗಿರಿಯ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಮಟ್ಟದ ಬಗರ್‌ಹುಕುಂ ಸಮಿತಿ ಸಭೆಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿಗಳನ್ನು ಪರಿಶೀಲಿಸಿದರು.   

ಚನ್ನಗಿರಿ: ತಾಲ್ಲೂಕಿನ ಅರಣ್ಯ ಹಾಗೂ ಕಂದಾಯ ಇಲಾಖೆಗೆ ಸೇರಿದ ಪ್ರದೇಶಗಳಲ್ಲಿ ಬಗರ್‌ಹುಕುಂ ಸಾಗುವಳಿ ಮಾಡಿಕೊಂಡ ಸಾಗುವಳಿದಾರರಿಗೆ ಹಂತ ಹಂತವಾಗಿ ಹಕ್ಕುಪತ್ರಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಸದ್ಯ 73 ಸಾಗುವಳಿದಾರರಿಗೆ ಸಾಗುವಳಿ ಹಕ್ಕುಪತ್ರ ನೀಡಲು ತೀರ್ಮಾನಿಸಲಾಗಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಬಗರ್‌ಹುಕುಂ ಸಮಿತಿ ಸಭೆಯಲ್ಲಿ ಮಾತನಾಡಿದರು.

ಅರ್ಜಿ ನಮೂನೆ 53ರ ಅಡಿಯಲ್ಲಿ ಅರಣ್ಯ ಪ್ರದೇಶ ಹಾಗೂ ಕಂದಾಯ ಇಲಾಖೆಗೆ ಸೇರಿದ ಜಮೀನುಗಳಲ್ಲಿ ಸಾಗುವಳಿ ಮಾಡಿಕೊಂಡಿರುವ 544 ಸಾಗುವಳಿದಾರರು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಸಮಿತಿ 471 ಅರ್ಜಿಗಳಿಗೆ ಕಂದಾಯ ಹಾಗೂ ಅರಣ್ಯ ಇಲಾಖೆ ಅಭಿಪ್ರಾಯ ಪಡೆಯಲು ಕಳುಹಿಸಲಾಗಿದೆ. 73 ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಸಭೆ ಸಮ್ಮತಿ ನೀಡಿದೆ ಎಂದರು.

ADVERTISEMENT

ಹೊಸದಾಗಿ ಅರಣ್ಯ ಮತ್ತು ಕಂದಾಯ ಇಲಾಖೆಗೆ ಸೇರಿದ ಪ್ರದೇಶಗಳಲ್ಲಿ ಅಕ್ರಮವಾಗಿ ಸಾಗುವಳಿ ಮಾಡಿದರೆ ಸಹಿಸುವುದಿಲ್ಲ. ಹೊಸದಾಗಿ ಸಾಗುವಳಿ ಮಾಡಲು ಮುಂದಾದರೆ ಕೇಸು ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಸಿದರು. ತಹಶೀಲ್ದಾರ್ ಡಾ.ಪಟ್ಟರಾಜಗೌಡ, ಬಗರ್‌ಹುಕುಂ ಸಮಿತಿ ಸದಸ್ಯರಾದ ರಾಜೇಶ್ ನೆಲ್ಲಿ ಹಂಕಲು, ಉಮಾದೇವಿ, ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿ ಮಾವಿನಹೊಳಿಯಪ್ಪ, ಚನ್ನಗಿರಿ ಅರಣ್ಯಾಧಿಕಾರಿ ಸತೀಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.