ADVERTISEMENT

ಮಹಾತ್ಮರ ಬಲಿದಾನದ ಫಲ ಸ್ವಾತಂತ್ರ್ಯ: ರಾಮಪ್ಪ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 3:35 IST
Last Updated 16 ಆಗಸ್ಟ್ 2021, 3:35 IST
ಹರಿಹರದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಎಸ್. ರಾಮಪ್ಪ ಮಾತನಾಡಿದರು.
ಹರಿಹರದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಎಸ್. ರಾಮಪ್ಪ ಮಾತನಾಡಿದರು.   

ಹರಿಹರ: ‘ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಪ್ರಾಣ ಅರ್ಪಿಸಿದ್ದಾರೆ. ಅದರ ಫಲವಾಗಿ ಇಂದು ನಾವು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದೇವೆ’ ಎಂದು ಶಾಸಕ ಎಸ್. ರಾಮಪ್ಪ ಹೇಳಿದರು.

ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಯೋಧರ ತ್ಯಾಗಕ್ಕೆ ಗೌರವ ಸಲ್ಲಿಸಬೇಕಿದೆ. ಮಕ್ಕಳಿಗೆ ಹುತಾತ್ಮರ ಜೀವನ ಚರಿತ್ರೆಯನ್ನು ಪಠ್ಯದಲ್ಲಿ ಅಲ್ಲದೇ ಮನೆಯಲ್ಲಿಯೂ ನಿತ್ಯ ತಿಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ADVERTISEMENT

ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ ಧ್ವಜಾರೋಹಣ ನೆರವೇರಿಸಿದರು. ಕೋವಿಡ್ ಸಂದರ್ಭದಲ್ಲಿ ವಿಶೇಷ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿ ಹಾಗೂ ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ನಗರಸಭೆ ಅಧ್ಯಕ್ಷೆ ಡಿ.ಯು. ರತ್ನಾ, ಉಪಾಧ್ಯಕ್ಷ ಎಂ.ಎಸ್. ಬಾಬುಲಾಲ್, ಸದಸ್ಯರಾದ ಶಂಕರ್ ಖಟಾವಕರ್, ಪಿ.ಎನ್. ವಿರೂಪಾಕ್ಷ, ನಾಗರತ್ನಮ್ಮ, ಎಪಿಎಂಸಿ ಅಧ್ಯಕ್ಷ ಮಂಜುನಾಥ್ ಪಟೇಲ್, ಉಪಾಧ್ಯಕ್ಷ ಕೊಕ್ಕನೂರು ಬಸವರಾಜ್, ತಾಲ್ಲೂಕು ಪಂಚಾಯಿತಿ ಜಿ.ಡಿ. ಗಂಗಾಧರನ್, ಪೌರಾಯುಕ್ತೆ ಎಸ್. ಲಕ್ಷ್ಮೀ, ಬಿಇಒ ಎಚ್.ಸಿ. ಸಿದ್ದಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಮೋಹನ್, ಸಿಪಿಐ ಸತೀಶ್ ಕುಮಾರ್, ಕಸಾಪ ಅಧ್ಯಕ್ಷ ರೇವಣಸಿದ್ದಪ್ಪ ಅಂಗಡಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.