ADVERTISEMENT

ದಾವಣಗೆರೆ: ಮನೆಗೆ ತೆರಳಿದ 8 ಕೈದಿಗಳು

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 12:15 IST
Last Updated 1 ಏಪ್ರಿಲ್ 2020, 12:15 IST

ದಾವಣಗೆರೆ: ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಜೈಲಿನೊಳಗೆ ಜನದಟ್ಟಣೆ ಕಡಿಮೆ ಮಾಡಲು ಸಣ್ಣಪುಟ್ಟ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಎಂಟು ವಿಚಾರಣಾಧೀನ ಕೈದಿಗಳನ್ನು ಮೂರು ತಿಂಗಳ ಅವಧಿಗೆ ಮಧ್ಯಂತರ ಜಾಮೀನಿನ ಮೇಲೆ ಇಲ್ಲಿನ ಜಿಲ್ಲಾ ಕಾರಾಗೃಹದಿಂದ ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಿ ಮನೆಗೆ ಕಳುಹಿಸಿಕೊಡಲಾಯಿತು.

‘ಮುಚ್ಚಳಿಕೆ ಬರೆಸಿಕೊಂಡು ಎಂಟು ಕೈದಿಗಳನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿ, ಪೊಲೀಸ್‌ ವಾಹನದಲ್ಲಿ ಅವರ ಮನೆಗೆ ಕಳುಹಿಸಿಕೊಡಲಾಯಿತು. ಬೆಳಗಾವಿ ಜಿಲ್ಲೆಯ ಇಬ್ಬರು, ಚಿತ್ರದುರ್ಗ ಜಿಲ್ಲೆಯ ಒಬ್ಬ ಹಾಗೂ ದಾವಣಗೆರೆ ಜಿಲ್ಲೆಯ ಐದು ಕೈದಿಗಳಿದ್ದರು’ ಎಂದು ಜಿಲ್ಲಾ ಕಾರಾಗೃಹದ ಅಧೀಕ್ಷಕ ಕರ್ಣ ಬಿ. ಕ್ಷತ್ರಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

‘ಕೊರೊನಾ ಸೋಂಕು ಹರಡುವುದನ್ನು ತಡೆಯಲು ಮನೆಯಲ್ಲೇ ಉಳಿಯಬೇಕು. ಕೋವಿಡ್‌–19 ರೋಗ ಬಾರದಂತೆ ಮಾಡಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕೈದಿಗಳಿಗೆ ತಿಳಿವಳಿಕೆ ನೀಡಲಾಗಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.