ದಾವಣಗೆರೆ: ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಕಾರು ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟು, 7 ಜನರು ಗಾಯಗೊಂಡ ಘಟನೆ ಚನ್ನಗಿರಿ ತಾಲ್ಲೂಕಿನ ದೋಣಿಹಳ್ಳಿ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಮೃತನನ್ನು ಸಂದೇಶ ನಾಯ್ಕ (19) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ರವಿ, ನಿತಿನ್, ಪ್ರವೀಣ್, ವೆಂಕಟೇಶ್, ಚೇತನ್, ರುದ್ರಾನಾಯ್ಕ ಹಾಗೂ ಆಂಜನೇಯ ಗಾಯಗೊಂಡಿದ್ದು, ಚನ್ನಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಮಗಳೂರು ಪ್ರವಾಸ ಮುಗಿಸಿ ಚನ್ನಗಿರಿಗೆ ಮರಳುತ್ತಿದ್ದ ಯುವಕರು ದೋಣಿಹಳ್ಳಿ ಬಳಿಯ ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನ ನಿಲುಗಡೆ ಮಾಡಿ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದೆ ಎಂದು ಚನ್ನಗಿರಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.