
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ದಾವಣಗೆರೆ: ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೇ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹರಿಹರ ನಗರ ಠಾಣೆಯ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಹರಿಹರದ ಗಾಂಧಿ ನಗರದ ಶೌಕತ್ ಅಲಿ (50) ಬಂಧಿತ ಆರೋಪಿ. ಹರಿಹರ ನಗರ ಠಾಣೆಯಲ್ಲಿ 2014, 2015 ಹಾಗೂ 2016ರಲ್ಲಿ ಆರೋಪಿ ವಿರುದ್ಧ 5 ಪ್ರಕರಣಗಳು ದಾಖಲಾಗಿದ್ದವು.
ಈ ಎಲ್ಲ ಪ್ರಕರಣಗಳ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶೌಕತ್ ಅಲಿ ಪತ್ತೆಗೆ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್ ಸೂಚಿಸಿದ್ದರು. ಹರಿಹರ ನಗರ ಠಾಣೆಯ ಇನ್‌ಸ್ಪೆಕ್ಟರ್ ಆರ್.ಎಫ್. ದೇಸಾಯಿ ನೇತೃತ್ವದ ತಂಡ ಆರೋಪಿಯನ್ನು ತುಮಕೂರು ರೈಲ್ವೆ ನಿಲ್ದಾಣದ ಬಳಿ ಪತ್ತೆ ಮಾಡಿ ಬಂಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.