
ಜಗಳೂರು: ಲಾರಿ ಡಿಕ್ಕಿ ಹೊಡೆಸಿ ಪಾದಚಾರಿಯ ಸಾವಿಗೆ ಕಾರಣವಾಗಿದ್ದ ಚಾಲಕನನ್ನು 32 ವರ್ಷ ನಂತರ ಜಗಳೂರು ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಅರಸಿಕೆರೆಯ ಗಂಗಾಧರಪ್ಪ (67) ಬಂಧಿತ ಆರೋಪಿ.
ಘಟನೆ ವಿವರ: 1994ರಲ್ಲಿ ತಾಲ್ಲೂಕಿನ ಕಲ್ಲೇದೇವರಪುರ ಗ್ರಾಮದ ಸಮೀಪದ ಹಳೆಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಚಾಲಕ ಲಾರಿ ಹರಿಸಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆ ನಂತರ ಆರೋಪಿ ತಲೆಮರೆಸಿಕೊಂಡಿದ್ದನು.
ಜಗಳೂರಿನ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ 304 (ಎ) ಐಪಿಸಿ ಅಡಿ ಮೊಕದ್ದಮೆ ದಾಖಲಿಸಲಾಗಿತ್ತು. ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಓಡಾಡಿಕೊಂಡಿದ್ದ ಆರೋಪಿಯನ್ನು ಸಿಪಿಐ ಸಿದ್ರಾಮಯ್ಯ ಅವರ ಮಾರ್ಗದರ್ಶನದಲ್ಲಿ ಎಎಸ್‌ಐ ವೆಂಕಟೇಶ್ ಜಿ.ಟಿ. ಅವರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೂರು ದಶಕದ ನಂತರ ಬಂಧಿಸಿರುವುದು ವಿಶೇಷ. ಜಗಳೂರಿನ ನ್ಯಾಯಾಲಯಕ್ಕೆ ಬುಧವಾರ ಹಾಜರಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.