ADVERTISEMENT

ಸ್ವಯಂ ಪ್ರೇರಿತ ರಕ್ತದಾನಿಗಳಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 25 ಜೂನ್ 2019, 20:15 IST
Last Updated 25 ಜೂನ್ 2019, 20:15 IST
ದಾವಣಗೆರೆಯಲ್ಲಿ ಸ್ವಯಂಪ್ರೇರಿತ ರಕ್ತದಾನಿಗಳನ್ನು ಮಂಗಳವಾರ ಗೌರವಿಸಲಾಯಿತು
ದಾವಣಗೆರೆಯಲ್ಲಿ ಸ್ವಯಂಪ್ರೇರಿತ ರಕ್ತದಾನಿಗಳನ್ನು ಮಂಗಳವಾರ ಗೌರವಿಸಲಾಯಿತು   

ದಾವಣಗೆರೆ: ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ 21 ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿಕೊಂಡು ರಕ್ತದಾನ ಮಾಡುತ್ತಿರುವ 11 ಮಂದಿಯನ್ನು ಮಂಗಳವಾರ ಸರ್ಕಾರಿ ಕೈಗಾರಿಕಾ ಸಂಸ್ಥೆಯನ್ನು ಸನ್ಮಾನಿಸಲಾಯಿತು.

ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿಭಾರತೀಯ ರೆಡ್‌ಕ್ರಾಸ್‌, ಲೈಫ್‌ಲೈನ್‌ ಸ್ವಯಂಪ್ರೇರಿತ ರಕ್ತದಾನಿಗಳ ಸಮೂಹ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಎನ್‌ಎಸ್‌ಎಸ್‌ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಡಾ ಎ.ಎಂ ಶಿವಕುಮಾರ್ ಮಾತನಾಡಿ, ‘ನಮ್ಮ ರಕ್ತದಾನ ಸಮೂಹದಲ್ಲಿ 3 ಸಾವಿರ ರಕ್ತದಾನಿಗಳಿದ್ದಾರೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ರಕ್ತ ಸಂಗ್ರಹ, ರಕ್ತ ವಿಭಜನೆ ಮಾಡಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

ಪ್ರಾಚಾರ್ಯ ಎನ್‌. ಏಕನಾಥ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪತ್ರಕರ್ತರ ಕೂಟದ ಅಧ್ಯಕ್ಷ ಬಿ.ಎನ್. ಮಲ್ಲೇಶ್, ರಕ್ತದಾನಿಗಳ ಸಮೂಹದ ಅಧ್ಯಕ್ಷ ಅನಿಲ್ ಬರಂಗಳ, ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಆಡಳಿತ ಅಧಿಕಾರಿ ಕೃಷ್ಣ ನಾಯ್ಕ, ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ. ರಾಘವನ್, ರೆಡ್‌ಕ್ರಾಸ್‌ ಕೋಶಾಧಿಕಾರಿ ಗೌಡ್ರ ಚನ್ನಬಸಪ್ಪ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.