ADVERTISEMENT

ಪದವಿ ಪರೀಕ್ಷೆಯ ಫಲಿತಾಂಶದ ಗೊಂದಲ ಪರಿಹರಿಸಲು ಎಐಡಿಎಸ್‌ಒ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 5:12 IST
Last Updated 2 ಡಿಸೆಂಬರ್ 2022, 5:12 IST
ದಾವಣಗೆರೆಯ ಜಯದೇವ ವೃತ್ತದಲ್ಲಿ ಆಲ್‌ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಸದಸ್ಯರು ಪ್ರತಿಭಟನೆ ನಡೆಸಿದರು
ದಾವಣಗೆರೆಯ ಜಯದೇವ ವೃತ್ತದಲ್ಲಿ ಆಲ್‌ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಸದಸ್ಯರು ಪ್ರತಿಭಟನೆ ನಡೆಸಿದರು   

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಬಂದಿದೆ. ಆದರೆ, ಅಧಿಕ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ. ವಿಷಯ ವಾರು ಉತ್ತೀರ್ಣರಾಗಿದ್ದರೂ ಅನುತ್ತೀರ್ಣ ಎಂದು ಪ್ರಕಟಗೊಂಡಿದೆ. ಪರೀಕ್ಷೆಗೆ ಹಾಜರಾಗಿದ್ದರೂ ಕೆಲವು ವಿದ್ಯಾರ್ಥಿಗಳಿಗೆ ಗೈರು ಎಂದು ತೋರಿಸುತ್ತಿದೆ. ಇಂಥ ಗೊಂದಲಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) ಗುರುವಾರ ಜಯದೇವ ಸರ್ಕಲ್‌ನಲ್ಲಿ ಪ್ರತಿಭಟನೆ ಮಾಡಿ ವಿಶ್ವವಿದ್ಯಾಲಯಕ್ಕೆ ಮನವಿ ಸಲ್ಲಿಸಿದೆ.

ಹೊಸ ಶಿಕ್ಷಣ ನೀತಿ ಜಾರಿ ಆದಾಗಿನಿಂದಲೂ ವಿದ್ಯಾರ್ಥಿಗಳು ಒಂದಲ್ಲ ಒಂದು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ತೊಂದರೆಗಳ ನಡುವೆ ಅವರು ಪರೀಕ್ಷೆಯನ್ನು ಬರೆದಿದ್ದರು. ಫಲಿತಾಂಶಕ್ಕಾಗಿ ಕಾಯುತ್ತಿದ್ದರು. ಈಗ ಫಲಿತಾಂಶ ಬಂದಾಗ ಮತ್ತೆ ಗೊಂದಲಗಳಾಗಿವೆ. ಉತ್ತೀರ್ಣರಾಗಿದ್ದರೂ ಅನುತ್ತೀರ್ಣ, ಹಾಜರಾಗಿದ್ದರೂ ಗೈರು ಎಂದೆಲ್ಲ ಬಂದಿರುವ ಬಗ್ಗೆ ವಿಶ್ವವಿದ್ಯಾಲಯಕ್ಕೆ ತಿಳಿಸಿದ್ದರೂ ಸರಿಪಡಿಸಿಲ್ಲ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.

ವಿಶ್ವವಿದ್ಯಾಲಯವು ವಿದ್ಯಾರ್ಥಿ ಗಳ ಪರವಾಗಿ ನಿಂತು ಫಲಿತಾಂಶ ಪ್ರಕಟಣೆಯಲ್ಲಿ ಆಗಿರುವ ಗೊಂದಲ ಗಳನ್ನು ಪರಿಹರಿಸಬೇಕು. ಒಂದು ಸಮಿತಿ ಮಾಡಿ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಪೂಜಾ ನಂದಿಹಳ್ಳಿ, ಪುಷ್ಪಾ, ಕಾವ್ಯ, ವಿದ್ಯಾರ್ಥಿಗಳಾದ ನವಾಜ್‌, ಅಭಿ, ಅಭಿಷೇಖ್‌ ಕೆ., ಕೀರ್ತಿ, ಪ್ರಜ್ವಲ್‌, ಮಧು ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.