ADVERTISEMENT

ಸಹಶಿಕ್ಷಕಿ ಶೋಭಾಗೆ ‘ಅಕ್ಷರ ಸಿರಿ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 4:49 IST
Last Updated 2 ಡಿಸೆಂಬರ್ 2022, 4:49 IST
ಆರ್. ಶೋಭಾ
ಆರ್. ಶೋಭಾ   

ಸವಳಂಗ (ನ್ಯಾಮತಿ): ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಶಿಕ್ಷಣ ಸೇವೆ ಗುರುತಿಸಿ ನೀಡುವ ರಾಜ್ಯಮಟ್ಟದ ‘ಅಕ್ಷರ ಸಿರಿ’ ಪ್ರಶಸ್ತಿಗೆ ನ್ಯಾಮತಿ ತಾಲ್ಲೂಕು ಸವಳಂಗ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಆರ್. ಶೋಭಾ ಭಾಜನರಾಗಿದ್ದಾರೆ.

ಸವಳಂಗ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎರಡುವರೆ ದಶಕಗಳಿಂದ ಸಹಶಿಕ್ಷಕಿಯಾಗಿ ವೃತ್ತಿ ನಡೆಸುತ್ತಿರುವ ಶೋಭಾ ಅವರು ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ, ಪ್ರತಿಭಾ ಕಾರಂಜಿ, ಕ್ರೀಡೆಗಳಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವಲ್ಲಿ ತೊಡಗಿಕೊಂಡಿದ್ದಾರೆ.

ಶಾಲೆಯ ಹಳೆ ವಿದ್ಯಾರ್ಥಿಗಳನ್ನು ಸಂಘಟನೆ ಮಾಡಿ ಶಾಲೆಗೆ ದೇಣಿಗೆ ಸಂಗ್ರಹಿಸುವ ಮೂಲಕ ಶಾಲೆ ಮತ್ತು ವಿದ್ಯಾರ್ಥಿಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವುದನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಎರಡು ಬಾರಿ ನಲಿ–ಕಲಿ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದಿದ್ದಾರೆ.

ADVERTISEMENT

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಿಪಟೂರಿನಲ್ಲಿ ಬುಧವಾರ ಆಯೋಜಿಸಿದ್ದ ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಅಕ್ಷರ ಸಿರಿ ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಸಮಾರಂಭದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಇದ್ದರು.

‘ಶಿಕ್ಷಣ ಇಲಾಖೆ, ಶಾಲೆಯ ಶಿಕ್ಷಕರ ಸಹಕಾರ ಹಾಗೂ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರೋತ್ಸಾಹದಿಂದ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗಿದೆ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುವೆ’ ಎಂದುಶೋಭಾ ಅವರು ‘ಪ್ರಜಾವಾಣಿ’ಯೊಂದಿಗೆ ಸಂತಸ ಹಂಚಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.