ಮಲೇಬೆನ್ನೂರು: ಪ್ರಸಕ್ತ ಸಾಲಿನ ಅಕ್ಷಯತದಿಗೆ ಅಮಾವಾಸ್ಯೆ ಪ್ರಯುಕ್ತ ಶನಿವಾರ ಹೆಚ್ಚಿನ ಸಂಖ್ಯೆ ಭಕ್ತರು ಕರಿಬಸವೇಶ್ವರ ಸ್ವಾಮಿ ‘ಅಜ್ಜಯ್ಯ’ನ ದರ್ಶನ ಪಡೆದರು.
ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಸಾಮೂಹಿಕ ರುದ್ರಾಭಿಷೇಕ, ಭಜನೆ ಜನಮನ ಸೆಳೆದವು.
ಕಳೆದೆರಡು ವರ್ಷಗಳಿಂದ ಕಳೆಗುಂದಿದ್ದ ಅಮಾವಾಸ್ಯೆ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಸ್ನಾನಘಟ್ಟ ಹಾಗೂ ನದಿಪಾತ್ರದಲ್ಲಿ ಹೆಚ್ಚಿನ ಜನಜಂಗುಳಿ ಕಂಡುಬಂದಿತು. ಸರದಿ ಸಾಲಿನಲ್ಲಿ ಬಂದು ಸ್ವಾಮಿ ದರ್ಶನ ಪಡೆದರು. ಕರಿಬಸವೇಶ್ವರ ಗದ್ದುಗೆ ಟ್ರಸ್ಟ್ ವತಿಯಿಂದ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.