ನ್ಯಾಮತಿ: ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಂ ಅವರ ಆಶಯಗಳನ್ನು ಈಡೇರಿಸಲು ಎಲ್ಲರೂ ಶ್ರಮಿಸಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಮನವಿ ಮಾಡಿದರು.
ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಇಲ್ಲಿ ಸೋಮವಾರ ಜಂಟಿಯಾಗಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಕಾರಿಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕ ಸೋಮಶೇಖರ್ ಶಿವಮೊಗ್ಗಿ ಉಪನ್ಯಾಸ ನೀಡಿದರು.
ಉಪವಿಭಾಗಾಧಿಕಾರಿ ವಿ.ಅಭಿಷೇಕ್, ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ.ರಾಘವೇಂದ್ರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶರಾವ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಎಚ್.ಎಲ್.ಉಮಾ, ಬೆಸ್ಕಾಂ ಎಂಜಿನಿಯರ್ ಬಿ.ಕೆ.ಶ್ರೀನಿವಾಸ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದಪ್ಪ ಜಿಗಣಪ್ಪನವರ್, ಪೊಲೀಸ್ ಇನ್ಸ್‌ಸ್ಪೆಕ್ಟರ್ ಎನ್.ಎಸ್.ರವಿ, ನಿವೃತ್ತ ಉಪತಹಶೀಲ್ದಾರ್ ನ್ಯಾಮತಿ ನಾಗರಾಜಪ್ಪ, ದಲಿತ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಇದಕ್ಕೂ ಮೊದಲು ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಅವರ ಭಾವಚಿತ್ರಗಳನ್ನು ಕಲ್ಲುಮಠದಿಂದ ತಾಲ್ಲೂಕು ಕಚೇರಿಗೆ ಮೆರವಣಿಗೆ ಮೂಲಕ ತರಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.