ದಾವಣಗೆರೆ: ನಗರದ ಹೊಸ ಬಸ್ ನಿಲ್ದಾಣದ ಬಳಿ ಇರುವ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಅಂಬೇಡ್ಕರ್ ಅಭಿವೃದ್ಧಿ ನಿಗಮದ ಕ್ಷೇತ್ರಾಧಿಕಾರಿಮರಿಸ್ವಾಮಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿತೊಡಿಸಲುರೈತ ಜಯಾನಾಯ್ಕ ಎನ್ನುವವರಿಂದಹತ್ತು ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದರು.
ಎಸಿಬಿ ಡಿವೈಎಸ್ಪಿ ಪರಮೇಶ್ವಪ್ಪ ಅವರ ನೇತ್ರತ್ವದಲ್ಲಿ ದಾಳಿ ಮಾಡಿ ಲಂಚದ ಹಣ ವಶಪಡಿಸಿಕೊಳ್ಳಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.