ADVERTISEMENT

ಮತ ಹಾಕಲು ಅಮೆರಿಕದಿಂದ ಬಂದರು

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2019, 11:09 IST
Last Updated 23 ಏಪ್ರಿಲ್ 2019, 11:09 IST
ಅಮೆರಿಕದ ಕ್ಯಾಲಿಫೋರ್ನಿಯದಿಂದ ಬಂದು ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳದ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಸಾಫ್ಟ್‌ವೇರ್ ಎಂಜಿನಿಯರ್ ವಿಜಯಕುಮಾರ್ ಐರಣಿ
ಅಮೆರಿಕದ ಕ್ಯಾಲಿಫೋರ್ನಿಯದಿಂದ ಬಂದು ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳದ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಸಾಫ್ಟ್‌ವೇರ್ ಎಂಜಿನಿಯರ್ ವಿಜಯಕುಮಾರ್ ಐರಣಿ   

ದಾವಣಗೆರೆ: ಸಾಫ್ಟ್‌ವೇರ್‌ ಎಂಜಿನಿಯರ್‌ ಒಬ್ಬರು ಅಮೆರಿಕದ ಕ್ಯಾಲಿಫೋರ್ನಿಯದಿಂದ ಬಂದು ಮತ ಹಾಕಿದ್ದಾರೆ. ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳದ ವಿಜಯಕುಮಾರ್ ಸಿ. ಐರಣಿ ಅವರು 14 ವರ್ಷಗಳಿಂದ ಅಲ್ಲಿಯೇ ನೆಲೆಸಿದ್ದಾರೆ.

ಚುನಾವಣೆ ಕಾರಣಕ್ಕಾಗಿಯೇ ರಜೆ ಹೊಂದಿಸಿಕೊಂಡು ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದ ಅವರು, ಮಂಗಳವಾರ ಕಕ್ಕರಗೊಳ್ಳದ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.

‘ಈ ಸಲದ ಚುನಾವಣೆ ದೇಶದ ಭವಿಷ್ಯದ ದೃಷ್ಟಿಯಿಂದ ಬಹಳ ಮುಖ್ಯ. ಯೋಗ್ಯರ ಆಯ್ಕೆಗೆ ಪ್ರತಿ ಮತವೂ ಮುಖ್ಯ. ಮತ ಹಾಕಿ ನನ್ನ ಜವಾಬ್ದಾರಿಯನ್ನು ಮೆರೆದಿದ್ದೇನೆ’ ಎಂದು ವಿಜಯಕುಮಾರ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.