ADVERTISEMENT

ದಾವಣಗೆರೆ: ಅಮಿತ್ ಶಾ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 8:42 IST
Last Updated 2 ಸೆಪ್ಟೆಂಬರ್ 2021, 8:42 IST
   

ದಾವಣಗೆರೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಾವಣಗೆರೆಯ ಜಿಎಂಐಟಿ ಕ್ಯಾಂಪಸ್ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಭದ್ರತೆ ಕಾರಣದಿಂದ ವಿವಿಧ ಸ್ಥಳಗಳಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳನ್ನು ಸಂಸದ ಜಿ.ಎಂ. ಸಿದ್ದೇಶ್ವರ ಒಡೆತನದ ಜಿಎಂಐಟಿ ಕ್ಯಾಂಪಸ್‌ನಲ್ಲೇನಿಗದಿಪಡಿಸಲಾಗಿದೆ. ಮಧ್ಯಾಹ್ನ 3ಕ್ಕೆ ದಾವಣಗೆರೆಯ ಗಾಂಧಿ ಭವನ, ಕೊಂಡಜ್ಜಿಯಲ್ಲಿನ ಪೊಲೀಸ್ ಪಬ್ಲಿಕ್ ಶಾಲೆಯನ್ನು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ.

ಅಮಿತ್ ಶಾ ಅವರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಮುರುಗೇಶ ನಿರಾಣಿ, ಬೈರತಿ ಬಸವರಾಜ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳುವರು.

ADVERTISEMENT

ಅಗತ್ಯ ಸೌಲಭ್ಯಗಳ ಮನವಿ: ಭದ್ರತೆ ಕಾರಣದಿಂದ ಅಮಿತಾ ಶಾ ಕಾರ್ಯಕ್ರಮದಲ್ಲಿ ಕೆಲ ಬದಲಾವಣೆಯಾಗಿದೆ. ಕೊಂಡಜ್ಜಿ ಭಾಗದಲ್ಲಿ ಅರಣ್ಯ ಮತ್ತು ಕೆರೆ ಪ್ರದೇಶವಿದ್ದು, ಭದ್ರತೆ ಕಾರಣದಿಂದ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.

ಸ್ಥಳ ಪರಿಶೀಲನೆ: ಜಿಎಂಐಟಿ ಕ್ಯಾಂಪಸ್ ನಲ್ಲಿ ಅಮಿತ್ ಶಾ ಕಾರ್ಯಕ್ರಮದ ನಿಮಿತ್ತ ಎಡಿಜಿಪಿ ಎಂ.ಎಂ. ಸಲೀಂ,, ದಾವಣಗೆರೆ ಪೂರ್ವ ವಲಯ ಐಜಿಪಿ ರವಿ, ಎಸ್ಪಿ ಸಿ.ಬಿ. ರಿಷ್ಯಂತ್ ಸೇರಿದಂತೆ ಹಲವು ಅಧಿಕಾರಿಗಳು ವೇದಿಕೆಯನ್ನು ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.