ADVERTISEMENT

ಕೇಂದ್ರ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 3:19 IST
Last Updated 5 ಡಿಸೆಂಬರ್ 2020, 3:19 IST
ದೆಹಲಿಯಲ್ಲಿನ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಮತ್ತು ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ದಾವಣಗೆರೆಯ ಗಾಂಧಿ ವೃತ್ತದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಮತ್ತು ಎಐಟಿಯುಸಿ ಸದಸ್ಯರು ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ದೆಹಲಿಯಲ್ಲಿನ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಮತ್ತು ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ದಾವಣಗೆರೆಯ ಗಾಂಧಿ ವೃತ್ತದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಮತ್ತು ಎಐಟಿಯುಸಿ ಸದಸ್ಯರು ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ   

ದಾವಣಗೆರೆ: ದೆಹಲಿಯಲ್ಲಿನ ರೈತರ ಹೋರಾಟ ಬೆಂಬಲಿಸಿ ಹಾಗೂ ಕೇಂದ್ರ ಸರ್ಕಾರದ ರೈತ, ಕಾರ್ಮಿಕ ನೀತಿ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರಇಲ್ಲಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ (ಎಐಸಿಯುಸಿ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಹೋರಾಟದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬರುತ್ತಿರುವ ರೈತರನ್ನು ಪೊಲೀಸರ ಮೂಲಕ ಹತ್ತಿಕ್ಕುವ ಕೆಲಸವನ್ನು ಮಾಡುತ್ತಿರುವುದು ಖಂಡನೀಯ ಎಂದರು.

ಕೂಡಲೇ ಎಪಿಎಂಸಿ ಕಾಯ್ದೆ, ವಿದೇಶಿ ಬೀಜ ಕಾಯ್ದೆ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು.

ADVERTISEMENT

ಬಳಿಕ ಉಪವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಎಐಸಿಯುಸಿ ಜಿಲ್ಲಾಧ್ಯಕ್ಷೆ ಎಂ.ಬಿ. ಶಾರದಮ್ಮ, ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಮಲ್ಲಮ್ಮ, ಖಜಾಂಚಿ ವಿಶಾಲಾಕ್ಷಿ ಮೃತ್ಯುಂಜಯ, ರೇಣುಕಮ್ಮ, ಸಿ.ಬಿ. ಕಾಳಮ್ಮ, ಕೆ. ಸುಧಾ, ಅಂಬುಜ, ಜ್ಯೋತಿ, ರಾಧಾ, ಮಂಗಳ, ಭಾಗ್ಯಲಕ್ಷ್ಮಿ, ಅಂಜಿನಮ್ಮ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.