ADVERTISEMENT

ದಾವಣಗೆರೆ | ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್: ನಾಳೆ ಲಿಖಿತ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2024, 16:09 IST
Last Updated 27 ಜನವರಿ 2024, 16:09 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ದಾವಣಗೆರೆ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ (ಸಿಎಆರ್/ಡಿಎಆರ್) (ಪುರುಷ ಹಾಗೂ ತೃತೀಯ ಲಿಂಗ ಪುರುಷ) -3064 ಹುದ್ದೆಗಳಿಗೆ ಲಿಖಿತ ಪರೀಕ್ಷೆ ಜ.28ರಂದು ಬೆಳಗ್ಗೆ 11ರಿಂದ 12.30ರವರೆಗೆ ನಡೆಯಲಿದೆ.

ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೊಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸಬೇಕು. ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸಕೂಡದು.

ADVERTISEMENT

ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸಕೂಡದು. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಿದ್ದು, ಅಭ್ಯರ್ಥಿಗಳು ತೆಳುವಾದ ಅಡಿ ಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ

ನಗರದ 40 ಪರೀಕ್ಷಾ ಕೇಂದ್ರಗಳಲ್ಲಿ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಲ್ಲಿ ಜ.28ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸುವಂತೆ ಎಸ್‌ಪಿ ಅವರಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.