
ಪ್ರಜಾವಾಣಿ ವಾರ್ತೆ
ಹರಪನಹಳ್ಳಿ: ‘ಸಂಪುಟ ವಿಸ್ತರಣೆ ಅಥವಾ ಪುನಾರಚಣೆ ಹೈಕಮಾಂಡ್ಗೆ ಬಿಟ್ಟ ವಿಚಾರ. ನಾನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿಲ್ಲ’ಎಂದು ಶಾಸಕ ಜಿ.ಕರುಣಾಕರ ರೆಡ್ಡಿ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಟ್ಟಣದ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವ ಸಲ್ಲಿಸಲಾಗಿದೆ.ಪಟ್ಟಣದ ಒಳಚರಂಡಿ ಯೋಜನೆಗೆ ಹೆಚ್ಚುವರಿ ₹ 8 ಕೋಟಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ₹ 7ಕೋಟಿಗೆ ಪ್ರಸ್ತಾವ ಸಲ್ಲಿಸಲಾಗಿದ್ದು ಮುಂಜೂರಾಗಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಕಲ್ಯಾಣ ಕರ್ನಾಟಕ ಯೋಜನೆಯಡಿ ಬರುವ ಅನುದಾನದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರವಾಸಿ ಮಂದಿರ ವೃತ್ತದಿಂದ ಹೊಸಪೇಟೆ ಮಾರ್ಗದ ರಸ್ತೆ ವಿಸ್ತರಣೆಗೆ ₹ 5 ಕೋಟಿ ಪ್ರಸ್ತಾವನೆ ಸಲ್ಲಿಸಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.