ADVERTISEMENT

ದಾವಣಗೆರೆ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 14:00 IST
Last Updated 13 ಜುಲೈ 2020, 14:00 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಮೇಯರ್ ಬಿ.ಜಿ. ಅಜಯ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಮೇಯರ್ ಬಿ.ಜಿ. ಅಜಯ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.   

ದಾವಣಗೆರೆ: ತಿಂಗಳಿಗೆ ₹12 ಸಾವಿರ ಗೌರವಧನ ನೀಡಬೇಕು ಎಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಮಹಾನಗರಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಎಐಯುಟಿಯುಸಿ ನೇತೃತ್ವದಲ್ಲಿ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಆಯಾ ಗ್ರಾಮ ಜಿಲ್ಲೆ, ತಾಲ್ಲೂಕು, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿಗಳ ಎದುರು ಪ್ರತಿಭಟನೆ ನಡೆಸಿದ್ದು, ಅದರಂತೆ ನಗರದಲ್ಲಿ ಪಾಲಿಕೆ ಎದುರು ಪ್ರತಿಭಟನೆ ನಡೆಸಿ ಮೇಯರ್ ಬಿ.ಜಿ.ಅಜಯ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

‘ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ನಿರಂತರ ಹೋರಾಟ ಮಾಡುತ್ತಿದ್ದೆವೆ. ಇಲ್ಲಿಯವರೆಗೆ ಆಶಾ ಸಂಘದಿಂದ ರಾಜ್ಯವ್ಯಾಪಿ ಹೋರಾಟಗಳು ನಡೆದಿವೆ. ಆದರೆ ರಾಜ್ಯಸರ್ಕಾರ ನಿರ್ಲಕ್ಷ್ಯ ಮತ್ತು ಜನವಿರೋಧಿ ಧೋರಣೆ ಅನುಸರಿಸುತ್ತಿದೆ. ಕೊರೊನಾ ವಾರಿಯರ್ಸ್‍ಗಳ ನ್ಯಾಯಯುತ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳು ಸ್ಪಂದಿಸಬೇಕು. ಈ ಮೂಲಕ ಜನಪರ ಆರೋಗ್ಯದ ಕಾಳಜಿಯನ್ನು ತೋರಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ತಿಪ್ಪೇಸ್ವಾಮಿ ಅಣಬೇರು, ಎ. ನಾಗರತ್ನ, ಶಕುಂತಲಾ, ರುಕ್ಕಮ್ಮ, ಮಹಾದೇವಿ, ರೇಖಾ, ಲಕ್ಷ್ಮೀಬಾಯಿ, ಭಾರತಿ, ಪುಷ್ಪ, ಶೀಲಾ, ಸರ್ಮಮಂಗಳಾ, ನಾಗವೇಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.