ADVERTISEMENT

ದಾವಣಗೆರೆ | ಬೇಡಿಕೆ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 24 ಜುಲೈ 2020, 16:24 IST
Last Updated 24 ಜುಲೈ 2020, 16:24 IST
ದಾವಣಗೆರೆಯ ತಹಶೀಲ್ದಾರ್ ಕಚೇರಿ ಎದುರು ಶುಕ್ರವಾರ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು
ದಾವಣಗೆರೆಯ ತಹಶೀಲ್ದಾರ್ ಕಚೇರಿ ಎದುರು ಶುಕ್ರವಾರ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು   

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ 15ನೇ ದಿನವೂ ಮುಂದುವರಿದಿದ್ದು, ಶುಕ್ರವಾರ ಇಲ್ಲಿನ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 15 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಈ ಸಂಬಂಧ ಚರ್ಚೆ ನಡೆಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಹೇಳಿದ್ದರು. ಆದರೆ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಿಂಗಳಿಗೆ ₹ 12 ಸಾವಿರ ಗೌರವಧನ ನೀಡಬೇಕು.ಕೋವಿಡ್-19 ತಡೆಗೆ ಶ್ರಮಿಸಲು ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕು.
ಕೊರೊನಾಗೆ ತುತ್ತಾದ ಕಾರ್ಯಕರ್ತೆಯರಿಗೆ ಪರಿಹಾರ, ಸಂಪೂರ್ಣ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಶೀಘ್ರ ಬೇಡಿಕೆ ಈಡೇರಿಸದಿದ್ದರೆ ಜುಲೈ 29‌ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು. ಬಳಿಕ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಅಧ್ಯಕ್ಷೆ ಭಾರತಿ, ಮಂಜುನಾಥ್ ಕೈದಾಳೆ, ಮಂಜುನಾಥ್ ಕುಕ್ಕುವಾಡ, ಕರಿಯಮ್ಮ, ಲಲಿತಮ್ಮ, ಪರ್ವಿನ್ ಬಾನು, ರುಕ್ಕಮ್ಮ, ನಾಗರತ್ನಾ, ಶೀಲಾ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.