
ಹೊನ್ನಾಳಿ: ‘ಭಾರತದ ಅಭಿವೃದ್ಧಿ ರಥಕ್ಕೆ ರಾಜಮಾರ್ಗ ನಿರ್ಮಿಸಿದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಿ ಅವರು ಮಾತನಾಡಿದರು.
‘ಪಿ.ಎಂ. ಗ್ರಾಮ ಸಡಕ್ ಯೋಜನೆ, ಸರ್ವಶಿಕ್ಷಾ ಅಭಿಯಾನ, ರೈತರ ಬೆಳೆ ವಿಮಾ ಯೋಜನೆ, ಚತುಷ್ಪಥ ರಸ್ತೆ ಸೇರಿದಂತೆ ಹತ್ತಾರು ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜಕಾರಣದಲ್ಲಿ ಒಂದು ಹೊಸ ಮನ್ವಂತರ ಸೃಷ್ಟಿಸಿದವರು ವಾಜಪೇಯಿ’ ಎಂದರು.
ಡಿ. 27ರಂದು ಬೆಳಿಗ್ಗೆ 10 ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜಯಂತ್ಯುತ್ಸವವನ್ನು ಆಚರಿಸಲಾಗುವುದು ಎಂದು ರೇಣುಕಾಚಾರ್ಯ ತಿಳಿಸಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಕೆ.ಪಿ. ಕುಬೇರಪ್ಪ, ಮಂಜುನಾಥ್ ನೆಲಹೊನ್ನೆ, ಮಾರುತಿನಾಯ್ಕ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.