ಸಾವು
ಪ್ರಾತಿನಿಧಿಕ ಚಿತ್ರ
ದಾವಣಗೆರೆ: ನಗರದ ರೈಲು ನಿಲ್ದಾಣದ ಹೊರಭಾಗದಲ್ಲಿ ಸೋಮವಾರ ಪ್ರಯಾಣಿಕರಿಗೆ ಕಾಯುತ್ತ ಕುಳಿತಿದ್ದ ಆಟೊ ಚಾಲಕ ಹಠಾತ್ ನಿಧನರಾಗಿದ್ದಾರೆ.
ಇಲ್ಲಿನ ಎಸ್‌ಒಜಿ ಕಾಲೊನಿಯ ಎಸ್.ಸಂಗಪ್ಪ (71) ಮೃತಪಟ್ಟವರು. ಹೃದಯಾಘಾತದಿಂದ ಸಾವು ಸಂಭವಿಸಿರಬಹುದು ಎನ್ನಲಾಗಿದೆ.
ಸಂಗಪ್ಪ ಅವರು ರೈಲು ನಿಲ್ದಾಣದ ಹೊರಭಾಗದ ಆಟೊ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಾಯುತ್ತಿದ್ದರು. ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಆಟೊದಲ್ಲಿ ಕುಳಿತ ಸ್ಥಿತಿಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಇದನ್ನು ಗಮನಿಸಿದ ಆಟೊ ಚಾಲಕರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು, ಸಂಗಪ್ಪ ಅವರನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆ ತುಲುಪುವ ಮುನ್ನವೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ದೃಢಪಟ್ಟಿದ್ದಾರೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.