ದಾವಣಗೆರೆ: ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ (ಎಐಟಿಯುಸಿ) ಸಂಯೋಜಿತ) ರಾಜ್ಯಾಧ್ಯಕ್ಷರಾಗಿ ಆವರಗೆರೆ ಎಚ್.ಜಿ. ಉಮೇಶ್ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ರಾಜ್ಯ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಈ ಹಿಂದೆ ದಾವಣಗೆರೆಯವರೇ ಆದ ಎಚ್.ಕೆ. ರಾಮಚಂದ್ರಪ್ಪ ರಾಜ್ಯಾಧ್ಯಕ್ಷರಾಗಿದ್ದರು. ಅವರು ಇತ್ತೀಚಿಗೆ ನಿಧನರಾದ ಹಿನ್ನಲೆಯಲ್ಲಿ ಈ ಸ್ಥಾನ ತೆರವಾಗಿತ್ತು ಎಂದು ಎಐಟಿಯುಸಿ ದಾವಣಗೆರೆ ಜಿಲ್ಲಾ ಸಮಿತಿ ಅಧ್ಯಕ್ಷ ಕೆ. ರಾಘವೇಂದ್ರ ನಾಯರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.