ADVERTISEMENT

‘ಮತದಾನ ಮಹತ್ವ ತಿಳಿಸಲು ಜಾಗೃತಿ ಕಾರ್ಯಕ್ರಮ’

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2019, 16:31 IST
Last Updated 11 ಏಪ್ರಿಲ್ 2019, 16:31 IST
ಹೊನ್ನಾಳಿ ಪಟ್ಟಣದಲ್ಲಿ ಮತದಾನ ಜಾಗೃತಿ ಕಾರು ರ‍್ಯಾಲಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಸವರಾಜೇಂದ್ರ ಮಾತನಾಡಿದರು
ಹೊನ್ನಾಳಿ ಪಟ್ಟಣದಲ್ಲಿ ಮತದಾನ ಜಾಗೃತಿ ಕಾರು ರ‍್ಯಾಲಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಸವರಾಜೇಂದ್ರ ಮಾತನಾಡಿದರು   

ಹೊನ್ನಾಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸ್ವೀಪ್ ಕಾರ್ಯಕ್ರಮದಡಿ ಜಿಲ್ಲೆಯ 233 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಬಸವರಾಜೇಂದ್ರ ಹೇಳಿದರು.

ಗುರುವಾರ ಟಿ.ಬಿ. ವೃತ್ತದಲ್ಲಿ ಮಹಿಳಾ ಕಾರು ರ‍್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಜನ ಸಾಮಾನ್ಯರಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವನ್ನು ಮೂಡಿಸಲು ದಾವಣಗೆರೆ, ಸಂತೇಬೆನ್ನೂರು, ಚನ್ನಗಿರಿ, ಬಸವಾಪಟ್ಟಣದ ಮೂಲಕ ಹೊನ್ನಾಳಿಗೆ ರ‍್ಯಾಲಿ ಬಂದಿದ್ದು, ಇಲ್ಲಿನ ಪ್ರಮುಖ ಬೀದಿಗಳಲ್ಲಿ ರ‍್ಯಾಲಿ ನಡೆಸಿ, ನಂತರ ಮಲೆಬೆನ್ನೂರು, ಹರಿಹರದ ಮೂಲಕ ದಾವಣಗೆರೆಗೆ ತಂಡ ಹಿಂದಿರುಗಲಿದೆ ಎಂದರು.

ADVERTISEMENT

ಚುನಾವಣೆ ಹಬ್ಬದಂತೆ ಅದಕ್ಕಾಗಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಮೂಲಕ ಮತದಾನ ಜಾಗೃತಿ ತಂಡಗಳು ಮನೆ ಮನೆಗಳಿಗೆ ತೆರಳಿ ಮತದಾನದ ಮಹತ್ವಗಳನ್ನು ಜನರಿಗೆ ತಿಳಿಹೇಳುವ ಕೆಲಸ ಮಾಡುತ್ತಿವೆ ಎಂದರು.

ಕಳೆದ ಬಾರಿ ಅತಿ ಕಡಿಮೆ ಮತದಾನವಾದ ಸ್ಥಳಗಳನ್ನು ಗುರುತಿಸಿ ಅಲ್ಲಿ ಚುನಾವಣಾ ಪಾಠಶಾಲಾ ಕಾರ್ಯಕ್ರಮಗಳ ಮೂಲಕ ಹೆಚ್ಚು ಮತದಾನ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದರು.

ದಾವಣಗೆರೆಯಲ್ಲಿ ಏ. 12 ರಂದು ಮತದಾನದ ಬಗ್ಗೆ ಕವಿಗೋಷ್ಠಿ. 13 ರಂದು ಸಹಿ ಸಂಗ್ರಹ ಅಭಿಯಾನ, ಪೊಲೀಸರ ಬೈಕ್ ರ‍್ಯಾಲಿ ಸೇರಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅಂಜನೇಯ, ತಾಲ್ಲೂಕು ಸಹಾಯಕ ಚುನಾವಣಾಧಿಕಾರಿ ಸುರೇಶ್ ರೆಡ್ಡಿ, ತಹಶೀಲ್ದಾರ್ ಮಲ್ಲಿಕಾರ್ಜುನ್, ನ್ಯಾಮತಿ ತಹಶೀಲ್ದಾರ್ ರೇಣುಕಾ, ತಾಲ್ಲೂಕು ಪಂಚಾಯಿತಿ ಇ.ಒ. ರಾಘವೇಂದ್ರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಾಲಚಂದ್ರ ಸೇರಿ ಅಧಿಕಾರಿಗಳು ಹಾಜರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.