ADVERTISEMENT

ಆಜಾದಿ ಕಾ ಅಮೃತ್ ಮಹೋತ್ಸವ್: ವಾಕಥಾನ್‍ಗೆ ಡಿಸಿ, ಎಸ್‌ಪಿ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 5:15 IST
Last Updated 1 ಅಕ್ಟೋಬರ್ 2021, 5:15 IST
ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ದಾವಣಗೆರೆ ಸ್ಮಾರ್ಟ್‌ಸಿಟಿ ಯೋಜನೆ ವತಿಯಿಂದ ಗುರುವಾರ ಏರ್ಪಡಿಸಿದ ವಾಕಥಾನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ರಿಷ್ಯಂತ್ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.

ದಾವಣಗೆರೆ: ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ ವಿವಿಧ ಇಲಾಖೆ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ ವಾಕಥಾನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ರಿಷ್ಯಂತ್ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.

ವೀರಗಾಸೆ ಸೇರಿ ಹಲವು ಸಾಂಸ್ಕೃತಿಕ ತಂಡಗಳು ಭಾಗವಹಿಸಿ
ದ್ದವು. ವಾಕಥಾನ್ ನಗರದ ಗುರುಭವನ ಬಳಿ ಆರಂಭವಾಯಿತು. ವಿವಿಧೆಡೆ ಸಂಚರಿಸಿದ ಬಳಿಕ ಗುರುಭವನದ ಬಳಿಯೇ ಮುಕ್ತಾಯಗೊಂಡಿತು.

ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ಅವರೂ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.