ADVERTISEMENT

ಬಗರ್‌ಹುಕುಂ ಸಾಗುವಳಿ: ಶೀಘ್ರ ಹಕ್ಕುಪತ್ರ

ತಾಲ್ಲೂಕು ಆಡಳಿತದಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 3:12 IST
Last Updated 16 ಆಗಸ್ಟ್ 2021, 3:12 IST
ಚನ್ನಗಿರಿಯ ತಾಲ್ಲೂಕು ಕ್ರೀಡಾಂಗಣದಲ್ಲಿ ಕೊರೊನಾ ವಾರಿಯರ್‌ಗಳನ್ನು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸನ್ಮಾನಿಸಿದರು.
ಚನ್ನಗಿರಿಯ ತಾಲ್ಲೂಕು ಕ್ರೀಡಾಂಗಣದಲ್ಲಿ ಕೊರೊನಾ ವಾರಿಯರ್‌ಗಳನ್ನು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸನ್ಮಾನಿಸಿದರು.   

ಚನ್ನಗಿರಿ: ‘ಅಭಿವೃದ್ಧಿಯಲ್ಲಿ ಮಾದರಿ ಕ್ಷೇತ್ರವಾಗಿ ಮಾಡಲು ಬದ್ಧನಾಗಿದ್ದು, ಎಲ್ಲರ ಸಹಕಾರ ಅಗತ್ಯ. ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ನೀಡಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ’ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತದಿಂದ ನಡೆದ 75ನೇ ಸ್ವಾತಂತ್ರ್ಯೋತ್ಸವ ಹಾಗೂ ಅಮೃತ ಮಹೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್‌ಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಪಟ್ಟಣದಲ್ಲಿ ಒಳ ಚರಂಡಿ ನಿರ್ಮಾಣ ಕಾಮಗಾರಿಗೆ ₹ 86.45 ಕೋಟಿ ಅನುದಾನ ಬಿಡುಗಡೆಯಾಗಿದ್ದು, ತ್ವರಿತವಾಗಿ ಕಾಮಗಾರಿ ಆರಂಭಿಸಲಾಗುವುದು. ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿ ಆರು ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ತಾಲ್ಲೂಕಿನ ರೈತರ ಖಾತೆಗಳಿಗೆ ಇದುವರೆಗೆ ₹ 64 ಕೋಟಿ ಹಣ ಜಮೆಯಾಗಿದೆ ಎಂದರು.

ADVERTISEMENT

ತಹಶೀಲ್ದಾರ್ ಡಾ.ಪಟ್ಟರಾಜಗೌಡ ಧ್ವಜಾರೋಹಣ ನೆರವೇರಿಸಿದರು. ಕೊರೊನಾ ವಾರಿಯರ್‌ಗಳು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 5 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತಾಲ್ಲೂಕಿನ 24 ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.