ADVERTISEMENT

ದಾವಣಗೆರೆ: ಬಾಲ್ಯ ವಿವಾಹಕ್ಕೆ ತಡೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 16:39 IST
Last Updated 26 ಜೂನ್ 2020, 16:39 IST

ದಾವಣಗೆರೆ: ತಾಲ್ಲೂಕಿನ ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯ ವಿವಾಹವನ್ನು ತಡೆ ಹಿಡಿಯಲಾಗಿದೆ.

ಶುಕ್ರವಾರ ಬೆಳಿಗ್ಗೆ ಸಹಾಯವಾಣಿಗೆ ದೂರು ಬಂದ ಹಿನ್ನೆಲೆಯಲ್ಲಿ ಮಕ್ಕಳ ಸಹಾಯವಾಣಿ ಕೊಲ್ಯಾಬ್ ಡಾನ್ ಬಾಸ್ಕೋ ತಂಡದ ಸಂಯೋಜಕರಾದ ಕೊಟ್ರೇಶ್ ಟಿ.ಎಂ. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಧರಣಿಕುಮಾರ್.ಎಂ.ಆರ್. ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಭಿಜಿತ್ ಅವರೊಂದಿಗೆ ಮದುವೆಯ ಮುನ್ನಾದಿನ ಮಧ್ಯರಾತ್ರಿ ಬಾಲಕಿಯ ಮನೆಗೆ ತೆರಳಿ ಪೋಷಕರ ಮನವೊಲಿಸಲಾಯಿತು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಬಾಲಕಿಯನ್ನು ಹಾಜರುಪಡಿಸಲಾಯಿತು.

18 ವರ್ಷ ತುಂಬುವವರೆಗೆ ಮದುವೆ ಮಾಡುವುದಿಲ್ಲವೆಂದು ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.