ADVERTISEMENT

ದಾವಣಗೆರೆ | ವಿಷಪ್ರಾಶನ ಆರೋಪ: ತನಿಖೆ ನಡೆಯಲಿ; ವಿಜಯಾನಂದ ಕಾಶಪ್ಪನವರ್‌

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಜುಲೈ 2025, 19:29 IST
Last Updated 21 ಜುಲೈ 2025, 19:29 IST
ವಿಜಯಾನಂದ ಕಾಶಪ್ಪನವರ
ವಿಜಯಾನಂದ ಕಾಶಪ್ಪನವರ   

ದಾವಣಗೆರೆ: ‘ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ಆಹಾರದಲ್ಲಿ ವಿಷಪ್ರಾಶನ ಆರೋಪ ಕುರಿತು ತನಿಖೆ ನಡೆಯಲಿ’ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್‌ ಒತ್ತಾಯಿಸಿದರು.

‘ಸ್ವಾಮೀಜಿ ಅವರ ಊಟದಲ್ಲಿ ವಿಷ ಬೆರೆಸಿರುವ ಶಂಕೆ ಇದೆ’ ಎಂದು ಶಾಸಕ ಅರವಿಂದ ಬೆಲ್ಲದ ಮಾಡಿರುವ ಆರೋಪಕ್ಕೆ ಸೋಮವಾರ ಪ್ರತಿಕ್ರಿಯಿಸಿದರು.

‘ಬೆಲ್ಲದ ಅವರು ಆಸ್ಪತ್ರೆಗೆ ಭೇಟಿ ನೀಡಿ ಸ್ವಾಮೀಜಿ ಆರೋಗ್ಯ ವಿಚಾರಿಸಿದಾಗಲೂ ಇಂತಹ ಮಾತು ಆಡಿರಲಿಲ್ಲ. ಬಿಜೆಪಿ ಶಾಸಕರಾದ ಅರವಿಂದ ಬೆಲ್ಲದ, ಬಸನಗೌಡ ಪಾಟೀಲ ಯತ್ನಾಳ, ಸಿ.ಸಿ. ಪಾಟೀಲ ಅವರಿಗೆ ಬೇರೊಬ್ಬರ ಮೇಲೆ ಆರೋಪ ಮಾಡದೇ ಇದ್ದರೆ ತಿಂದಿದ್ದು ಜೀರ್ಣವಾಗುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಸ್ವಾಮೀಜಿ ಮಠದಲ್ಲಿ ಪೂಜೆ ಮಾಡುತ್ತಾರೆಯೇ ಹೊರತು ರಸ್ತೆಯಲ್ಲಿ ಅಲ್ಲ. ಗುರುಗಳು ಮಠದಲ್ಲಿ ಇದ್ದರೆ ಒಳ್ಳೆಯದು, ಇಲ್ಲದೇ ಇದ್ದರೆ ಹೊಸ ಗುರುಗಳು ಬರಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.