ಬಸವಾಪಟ್ಟಣ: ಸಮೀಪದ ಚಿರಡೋಣಿಯಿಂದ ಒಂದು ಕಿ.ಮೀ.ದೂರದಲ್ಲಿರುವ ಹಳ್ಳವು ಪ್ರತಿ ಮಳೆಗಾಲದಲ್ಲಿ ತುಂಬಿ ಹರಿಯುತ್ತಿದ್ದು, ಜನ, ಜಾನುವಾರು ಹಾಗೂ ವಾಹನ ಸಂಚಾರಕ್ಕೆ ಕಷ್ಟವಾಗಿದೆ. ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಈ ಹಳ್ಳದ ಮಧ್ಯೆ ಎರಡು ಸಿಮೆಂಟ್ ಪೈಪ್ ಅಳವಡಿಸಿ ತಾತ್ಕಾಲಿಕವಾಗಿ ಸೇತುವೆ ನಿರ್ಮಿಸಿದ್ದರು. ಆದರೆ ಹಳ್ಳದಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಪೈಪ್ ಮುಳುಗಿದ್ದು, ಅದರ ಮೇಲೆ ನೀರು ಹರಿಯುತ್ತಿದೆ.
ರಾತ್ರಿ ವೇಳೆ ದಾಟುವಾಗ ಹಳ್ಳದಲ್ಲಿ ಬೀಳುವುದು ಸಾಮಾನ್ಯವಾಗಿದೆ. ಸೇತುವೆ ದುರಸ್ತಿ ಮಾಡಿ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಚಿರಡೋಣಿ ಮತ್ತು ಕಬ್ಬಳ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.