ಮಲೇಬೆನ್ನೂರು: ಸಮೀಪದ ಕುಂಬಳೂರು ಗ್ರಾಮದ ಬೀರಲಿಂಗೇಶ್ವರ ಸುವರ್ಣ ಮಹೋತ್ಸವ ಹಾಗೂ ಮರಿಬನ್ನಿ ಉತ್ಸವ ಭಾನುವಾರ ವೈಭವದಿಂದ ನಡೆಯಿತು.
ರಟ್ಟಿಹಳ್ಳಿ ಕಬ್ಬಿಣ ಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಗಂಗಾಪೂಜೆ, ವೀರಮಕ್ಕಳ ಕುಣಿತ, ಡೊಳ್ಳಿನ ಪದ, ವಿಶೇಷ ಪೂಜೆಗಳು ನರವೇರಿದವು. ಬಳಿಕ ದೊಡ್ಡ ಎಡೆ ನಿವೇದಿಸಿದರು. ಗ್ರಾಮದ ಸರ್ವ ದೇವರ ಉತ್ಸವ ಮೂರ್ತಿಗಳು ಭಾವಹಿಸಿದ್ದವು.
ಒಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿತು. ದೇವಾಲಯ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ಈರಗಾರರು ಇದ್ದರು.
ಹರಕೆ ಸಮರ್ಪಣೆ, ಜವಳ, ದಿಂಡು ಆಯೋಜಿಸಲಾಗಿತ್ತು. ದೇವಾಲಯಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಜೊತೆಗೆ ರಾಜ ಬೀದಿಯನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು.
ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.