ADVERTISEMENT

ಬೇಲಿಮಲ್ಲೂರು ವಿಎಸ್‍ಎಸ್‍ಎನ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 6:44 IST
Last Updated 20 ಡಿಸೆಂಬರ್ 2025, 6:44 IST
ಹೊನ್ನಾಳಿ ತಾಲ್ಲೂಕಿನ ಬೇಲಿಮಲ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಚ್.ಕೆ. ರೇವಣಪ್ಪ, ಉಪಾಧ್ಯಕ್ಷರಾಗಿ ಹೊನ್ನಮ್ಮ ಅವಿರೋಧವಾಗಿ ಆಯ್ಕೆಯಾದರು
ಹೊನ್ನಾಳಿ ತಾಲ್ಲೂಕಿನ ಬೇಲಿಮಲ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಚ್.ಕೆ. ರೇವಣಪ್ಪ, ಉಪಾಧ್ಯಕ್ಷರಾಗಿ ಹೊನ್ನಮ್ಮ ಅವಿರೋಧವಾಗಿ ಆಯ್ಕೆಯಾದರು   

ಹೊನ್ನಾಳಿ: ತಾಲ್ಲೂಕಿನ ಬೇಲಿಮಲ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಚ್.ಕೆ. ರೇವಣಪ್ಪ, ಉಪಾಧ್ಯಕ್ಷರಾಗಿ ಹೊನ್ನಮ್ಮ ಅವಿರೋಧವಾಗಿ ಆಯ್ಕೆಯಾದರು.

ನಿಕಟಪೂರ್ವ ಅಧ್ಯಕ್ಷರಾಗಿದ್ದ ಅಣ್ಣಪ್ಪ ಹಾಗೂ ಉಪಾಧ್ಯಕ್ಷರಾಗಿದ್ದ ಎಚ್.ಕೆ. ರೇವಣಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ. ರೇವಣಪ್ಪ, ಉಪಾಧ್ಯಕ್ಷ ಸ್ಥಾನಕ್ಕೆ ಹೊನ್ನಮ್ಮ ಅವರು ಕ್ರಮವಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು. ಹೀಗಾಗಿ ಇವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನವೀನ್‍ಕುಮಾರ್ ತಿಳಿಸಿದರು.

ADVERTISEMENT

ನಿರ್ದೇಶಕರಾದ ಮಲ್ಡ್ಯಪ್ಪ, ಟಿ. ರಾಮಪ್ಪ, ಮಹಾದೇವಪ್ಪ, ರಾಜಪ್ಪ, ಹಿರಿಯಮ್ಮ, ಕಮಲಮ್ಮ, ಸರೋಜಮ್ಮ, ವೀರೇಂದ್ರ, ಸಾವಿತ್ರಮ್ಮ, ಸಂಘದ ಕಾರ್ಯದರ್ಶಿ ಎಚ್.ಕೆ. ಸಿದ್ದಪ್ಪ, ಮಾಜಿ ಕಾರ್ಯದರ್ಶಿ ಎಂ.ಡಿ. ಹಳದಪ್ಪ ಹಾಗೂ ರಾಜಪ್ಪ ಮತ್ತು ಗ್ರಾಮದ ಹಾಲು ಉತ್ಪಾದಕರು, ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.