
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಹೊಸದುರ್ಗ: ತಾಲ್ಲೂಕಿನ ಬಿ.ವಿ. ನಗರದ ಸಮೀಪ ಭದ್ರಾ ಮೇಲ್ದಂಡೆ ಚಾನೆಲ್ ಬಳಿ ಕುರಿಗಳಿಗೆ ನೀರು ಕುಡಿಸಲು ಹೋಗಿ ಆಕಸ್ಮಿಕವಾಗಿ ಬಿದ್ದು ಯುವಕ ಮೃತಪಟ್ಟಿದ್ದಾನೆ.
ಮಾಡದಕೆರೆ ಹೋಬಳಿಯ ದೊಡ್ಡತಿಮ್ಮಯ್ಯನಹಟ್ಟಿ ಗ್ರಾಮದ ಮಂಜುನಾಥ (25) ಮೃತ ಯುವಕ. ಇವರು ಶನಿವಾರ ಸಂಜೆ ಕುರಿಗಳಿಗೆ ನೀರು ಕುಡಿಸಲು ಹೋದಾಗ ಘಟನೆ ನಡೆದಿದೆ. ಭಾನುವಾರ ಬೆಳಿಗ್ಗೆ ಗೊತ್ತಾಗಿದೆ.
ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.