
ಪ್ರಜಾವಾಣಿ ವಾರ್ತೆ
ದಾವಣಗೆರೆ: ‘ಬಿಹಾರ ಚುನಾವಣಾ ಫಲಿತಾಂಶವು ಕಾಂಗ್ರೆಸ್‌ಗೆ ಪಾಠವಾಗಿದೆ. ಲೋಪ ಕುರಿತು ವರಿಷ್ಠರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಪಕ್ಷಕ್ಕೆ ಸೋಲಾಗಿದ್ದು ಯಾಕೆ ಎಂಬ ಬಗ್ಗೆ ಚರ್ಚೆಯಾಗಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಶನಿವಾರ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮತಕಳವಿನ ಆರೋಪ ಕುರಿತು ಚುನಾವಣಾ ಆಯೋಗವೇ ಸ್ಪಷ್ಟ ಉತ್ತರ ನೀಡಬೇಕಿದೆ’ ಎಂದರು.
ದೆಹಲಿ ಭೇಟಿ ವೇಳೆ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಚರ್ಚೆ ಆಗಿಲ್ಲ. ಐದು ವರ್ಷ ಸಿ.ಎಂ ಆಗಿ ಮುಂದುವರಿಯುವುದಾಗಿ ಅವರೇ ಹೇಳಿದ್ದು, ಮುಂದುವರಿಯುತ್ತಾರೆ ಎಂದರು.
‘ಸಂಪುಟ ಪುನರ್ ರಚನೆಯು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಪಕ್ಷದ ವರಿಷ್ಠರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.