ಅಪಘಾತ
–ಪ್ರಾತಿನಿಧಿಕ ಚಿತ್ರ
ಹರಿಹರ: ಬೈಕ್ ಅಪಘಾತದಲ್ಲಿ ಗಾಯಗೊಂಡು ರಸ್ತೆ ಮಧ್ಯೆ ನರಳಾಡುತ್ತಿದ್ದ ವ್ಯಕ್ತಿಯನ್ನ ಆಸ್ಪತ್ರೆ ಸಿಬ್ಬಂದಿಯೇ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ತಾಲ್ಲೂಕಿನ ಬಿಳಸನೂರು ಗ್ರಾಮದ ನಿವಾಸಿ ಲೋಕೇಶಪ್ಪ ಪಿ. ಶನಿವಾರ ಹೊಸಹಳ್ಳಿ ಮಾರ್ಗ ಮಧ್ಯದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬಿದ್ದು, ಗಾಯಗೊಂಡಿದ್ದರು. ವಿಷಯ ತಿಳಿದ ಆರೋಗ್ಯ ಕೇಂದ್ರದ ಸಿಬ್ಬಂದಿ ನೀಲಪ್ಪ, ಮಂಜುನಾಥ್, ಅಕ್ಷಯ್, ಸಂತೋಷ್, ನಾಗರಾಜ್ ತಕ್ಷಣ ಸ್ಥಳಕ್ಕೆ ಆಗಮಿಸಿ, ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳುವನ್ನು ಹರಿಹರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆರೋಗ್ಯ ಕೇಂದ್ರದ ಸಿಬ್ಬಂದಿ ಸಮಯಪ್ರಜ್ಞೆ, ಮಾನವೀಯತೆಯನ್ನು ಲೋಕೇಶಪ್ಪ ಕುಟುಂಬದ ಸದಸ್ಯರು, ಗ್ರಾಮಸ್ಥರು ಶ್ಲಾಘಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.