
ಪ್ರಜಾವಾಣಿ ವಾರ್ತೆಚನ್ನಗಿರಿ: ತಾಲ್ಲೂಕಿನ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯ ನುಗ್ಗಿಹಳ್ಳಿ ಗ್ರಾಮದ ಬಳಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬೈಕ್‌ನಿಂದ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ತಾಲ್ಲೂಕಿನ ಸಾರಥಿ ಹೊಸೂರು ಗ್ರಾಮದ ವಾಸಿ ಯಶೋದಾ (20) ಮೃತ ಮಹಿಳೆ. ಇವರು ಪತಿಯೊಂದಿಗೆ ಬೈಕ್‌ನಲ್ಲಿ ಹೋಗುತ್ತಿರುವಾಗ ಘಟನೆ ಸಂಭವಿಸಿದೆ. ಇವರ ಪತಿಗೆ ತೀವ್ರ ಗಾಯಗಳಾಗಿದ್ದು, ಚನ್ನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.