ADVERTISEMENT

ದಾವಣಗೆರೆ | ಕಾರು–ಬೈಕ್‌ ಡಿಕ್ಕಿ: ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 21 ಜುಲೈ 2025, 4:00 IST
Last Updated 21 ಜುಲೈ 2025, 4:00 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ದಾವಣಗೆರೆ: ತಾಲ್ಲೂಕಿನ ಆರನೇಕಲ್ಲು ಗ್ರಾಮದ ಬಳಿ ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಶನಿವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ADVERTISEMENT

ಹದಡಿ ಗ್ರಾಮದ ಲಿಂಗರಾಜ್ (22) ಮೃತ ಯುವಕ. ಮನು (22) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಖಾಸಗಿ ಆಸ್ಪತ್ರೆಯೊಂದರ ಪ್ರಯೋಗಾಲಯದಲ್ಲಿ ಕೆಲಸ ಮಾಡುತ್ತಿದ್ದ ಲಿಂಗರಾಜ್‌, ಶನಿವಾರ ತಡರಾತ್ರಿ ಸ್ನೇಹಿತ ಮನು ಜೊತೆಗೆ ದ್ವಿಚಕ್ರ ವಾಹನದಲ್ಲಿ ಹದಡಿ ಗ್ರಾಮಕ್ಕೆ ಮರಳುತ್ತಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಲಿಂಗರಾಜ್‌ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹದಡಿ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.